Monday, December 2, 2024
Homeರಾಷ್ಟ್ರೀಯಬುಲೆಟ್‌ ಕದ್ದು ಎಸ್ಕೇಪ್‌ ಆಗುತ್ತಿದ್ದ ಕಳ್ಳ ಸಾರಿಗೆ ಬಸ್ಸಿನಡಿಗೆ ಬಿದ್ದು ಸ್ಥಳದಲ್ಲೇ ಭಯಾನಕ ಸಾವು

ಬುಲೆಟ್‌ ಕದ್ದು ಎಸ್ಕೇಪ್‌ ಆಗುತ್ತಿದ್ದ ಕಳ್ಳ ಸಾರಿಗೆ ಬಸ್ಸಿನಡಿಗೆ ಬಿದ್ದು ಸ್ಥಳದಲ್ಲೇ ಭಯಾನಕ ಸಾವು

ಬುಲೆಟ್ ಬೈಕ್ ಕದ್ದು ಎಸ್ಕೇಪ್ ಆಗುತ್ತಿದ್ದ ಕಳ್ಳ ಸಾರಿಗೆ ಬಸ್ಸಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಭಯಾನಕ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ತಮಿಳುನಾಡಿನ ಕೆಲವರಪಲ್ಲಿ ಗ್ರಾಮದ ಬಳಿ ಈ ಘಟನೆ ನಡೆದಿದೆ.
ಕರ್ನಾಟಕ, ತಮಿಳುನಾಡು ರಾಜ್ಯಗಳ ಗಡಿಭಾಗದಲ್ಲಿ ಇಂತಹದೊಂದು ಘಟನೆ ನಡೆದಿದೆ. 33 ವರ್ಷದ ಅಭಿನೇಶ್ ಪಾಂಡಿಯನ್ ಮೃತ ಬೈಕ್ ಕಳ್ಳ. ಅಭಿನೇಶ್ ಹೊಸೂರು ಸಮೀಪ ರಸ್ತೆ ಬದಿ ನಿಲ್ಲಿಸಿದ್ದ ಶೇಖರ್ ರೆಡ್ಡಿ ಎಂಬುವವರಿಗೆ ಸೇರಿದ ಬುಲೆಟ್ ಬೈಕ್ ಕದ್ದಿದ್ದ. ಮೂರು ಮಂದಿ ಬೈಕ್ ಕಳ್ಳರು ಬುಲೆಟ್ ಬೈಕ್ ಕಳ್ಳತನ ಮಾಡಿ ಎಸ್ಕೇಪ್ ಆಗುತ್ತಿದ್ದರು. ಬುಲೆಟ್ ಬೈಕ್ ಕಳ್ಳತನ ಮಾಡಿ ಹೋಗುತ್ತಿದ್ದಾಗ ಕಳ್ಳರು ತಮಿಳುನಾಡು ಸರ್ಕಾರಿ ಬಸ್‌ಗೆ ಡಿಕ್ಕಿ ಹೊಡೆದಿದ್ದಾರೆ. ಮತ್ತೊಂದು ಬೈಕ್‌ನಲ್ಲಿ ಕಳ್ಳನ ಜೊತೆಯಲ್ಲೇ ಬರುತ್ತಿದ್ದ ಇಬ್ಬರು ಕಳ್ಳರನ್ನು ಸ್ಥಳೀಯರು ಹಿಡಿದು ನಲ್ಲೂರು ಪೊಲೀಸರಿಗೆ ಒಪ್ಪಿಸಿದ್ದಾರೆ. ಸಾವನ್ನಪ್ಪಿದ ಬೈಕ್ ಕಳ್ಳನ ಮೃತದೇಹವನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular