ಮುಂಬಯಿ ಕುರ್ಲಾ ಪೂರ್ವದ ಬಂಟರ ಭವನ : ಜುಲೈ 29ರಂದು ಒಡಿಯೂರು ಶ್ರೀ ಗಳು ದಿವ್ಯ ಉಪಸ್ಥಿತಿಯಲ್ಲಿ ಗುರುಪೂರ್ಣಿಮೆ ಆಚರಣೆ

0
8

ಮುಂಬಯಿ : ಬಂಟರ ಸಂಘ ಮುಂಬಯಿ ಹಾಗೂ ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರ ಮುಂಬಯಿ ಮಹಾರಾಷ್ಟ್ರ ಘಟಕ ಇವರ ಜಂಟಿ ಸಂಯೋಜನೆಯಲ್ಲಿ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜುಲೈ 29ರಂದು ಮಧ್ಯಾಹ್ನ ಗಂಟೆ 2.00ರಿಂದ 27ನೇ ವರ್ಷದ ಗುರುಪೂರ್ಣಿಮಾ ಆಚರಣೆ ಜರಗಲಿದೆ.

ಈ ಸುಸಂದರ್ಭ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಹಾಗೂ ಸಾಧ್ವಿ ಶ್ರೀ ಮಾತಾನಂದಮಯೀಯವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಗುರುದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತಾ ಮಹಿಳಾ ವಿಕಾಸಕೇಂದ್ರದ ವಾರ್ಷಿಕೋತ್ಸವ- ಗರುವಂದನಾ ಕಾರ್ಯಕ್ರಮ ನಡೆಯಲಿದೆ.

ಆರಂಭದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನೆ. ಸಂಜೆ 6.00ಗಂಟೆಗೆ ಮಹಾಮಂಗಳಾರತಿ. ಬಳಿಕ ಪೂಜ್ಯ ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ ಧರ್ಮಸಭೆ. ಪ್ರಸಾದ ಮಂತ್ರಾಕ್ಷತೆ.

ಗುರುಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಗುರುಕೃಪೆಗೆ ಪಾತ್ರರಾಗಬೇಕಾಗಿ ಬಂಟರ ಸಂಘದ ಅಧ್ಯಕ್ಷ ರಾದ ಪ್ರವೀಣ ಭೋಜ ಶೆಟ್ಟಿ ಮತ್ತು ಪದಾಧಿಕಾರಿಗಳು ಹಾಗೂ ಬಳಗದ ಅಧ್ಯಕ್ಷರಾದ ದಾಮೋದರ ಎಸ್.ಶೆಟ್ಟಿ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.