ಮೂಲ್ಕಿ: ಬಂಟರ ಸಂಘ ಮೂಲ್ಕಿ ವತಿಯಿಂದ ಅ.13ರಂದು 2023-24ರ ಸಾಲಿನ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ, ಮೂಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ ಸಮಾರಂಭ ನಡೆಯಲಿದೆ. ಮೂಲ್ಕಿ ಬಂಟರ ಸಂಘದಲ್ಲಿ ಕಾರ್ಯಕ್ರಮ ನಡೆಯಲಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಮಂಗಳೂರು ಇದರ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬಂಟರ ಸಂಘ ಮೂಲ್ಕಿ ಇದರ ಅಧ್ಯಕ್ಷ ಅಶೋಕ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿ.ಕೆ. ಗ್ರೂಪ್ ಚೇರ್‌ಮ್ಯಾನ್ ಕರುಣಾಕರ ಎಂ. ಶೆಟ್ಟಿ ಮದ್ಯಗುತ್ತು ಇವರಿಗೆ 2024ರ ಮೂಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪ್ರವೀಣ ಭೋಜ ಶೆಟ್ಟಿ ಪ್ರಶಸ್ತಿ ಪ್ರದಾನಿಸಲಿದ್ದಾರೆ.
ಅನಿಲ್ ಶೆಟ್ಟಿ ಕೋಂಜಾಲಗುತ್ತು, ಸಿಎ ಅಶೋಕ ಶೆಟ್ಟಿ ಎಂ., ಉಮೇಶ್ ಕುಮಾರ್ ಶೆಟ್ಟಿ ಮುಖ್ಯ ಅತಿಥಿಗಳಾಗಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮೂಲ್ಕಿ. ಅ.13ರಂದು ಬಂಟರ ಸಂಘದ ವತಿಯಿಂದ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ, ಮೂಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ ಸಮಾರಂಭ
RELATED ARTICLES