Friday, May 23, 2025
Homeರಾಜ್ಯಖಾಸಗಿ ಬಸ್ಸು ಕಾರಿನ ಮೇಲೆ ಮಗುಚಿ ಬಿದ್ದು, ಕಾರು ಚಾಲಕ ಸ್ಥಳದಲ್ಲೇ ಸಾವು

ಖಾಸಗಿ ಬಸ್ಸು ಕಾರಿನ ಮೇಲೆ ಮಗುಚಿ ಬಿದ್ದು, ಕಾರು ಚಾಲಕ ಸ್ಥಳದಲ್ಲೇ ಸಾವು

ಶಿವಮೊಗ್ಗ: ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬಸ್ಸು ಕಾರಿನ ಮೇಲೆ ಮಗುಚಿಬಿದ್ದು, ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಸ್ಸಿನಲ್ಲಿದ್ದ ಕೆಲವರಿಗೆ ಗಾಯಗಳಾಗಿವೆ. ಶಿರಾಳಕೊಪ್ಪದ ದೇವಿಕೊಪ್ಪ ಬಳಿ ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದೆ.
ಆನವಟ್ಟಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ಸು ಮತ್ತು ಶಿವಮೊಗ್ಗದಿಂದ ಅನವಟ್ಟಿಯ ಕಡೆ ತೆರಳುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅತಿ ವೇಗವಾಗಿ ಬಂದ ಬಸ್ಸು ನಿಯಂತ್ರಣ ಕಳೆದುಕೊಂಡು ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಚಾಲಕನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಕಾರು ಚಾಲಕನ ಮೃತದೇಹ ಹೊರತೆಗೆಯಲು ಪೊಲೀಸರು ಹರಸಾಹಸಪಟ್ಟರು.

RELATED ARTICLES
- Advertisment -
Google search engine

Most Popular