ಜೈಸಲ್ಮೇರ್’ನಲ್ಲಿ ಬಸ್’ಗೆ ಬೆಂಕಿ : 20 ಮಂದಿ ಸಜೀವ ದಹನ

0
10


ರಾಜಸ್ಥಾನದ ಜೈಸಲ್ಮೇರ್ ಬಳಿ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌’ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚಲಿಸುತ್ತಿದ್ದ ಬಸ್ ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾಗಿ, ಹಲವಾರು ಪ್ರಯಾಣಿಕರು ಒಳಗೆ ಸಿಲುಕಿಕೊಂಡರು ಎಂದು ಜೈಸಲ್ಮೇರ್‌’ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೈಲಾಶ್ ದಾನ್ ಹೇಳಿದ್ದಾರೆ.
ಸಾವು ಸಂಭವಿಸಿದ ಬಗ್ಗೆ ವರದಿಯಾಗಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ಸಾಗಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ” ಎಂದು ಅಧಿಕಾರಿ ಹೇಳಿದರು. ಸುಟ್ಟಗಾಯಗಳನ್ನ ಚಿಕಿತ್ಸೆಗಾಗಿ ಜೈಸಲ್ಮೇರ್‌’ನಿಂದ ಜೋಧ್‌ಪುರಕ್ಕೆ ಆಂಬ್ಯುಲೆನ್ಸ್ ಮೂಲಕ ಸ್ಥಳಾಂತರಿಸಲಾಗಿದೆ. ಪೊಲೀಸರು ಇಲ್ಲಿಯವರೆಗೆ 20 ಸಾವುಗಳನ್ನ ದೃಢಪಡಿಸಿದ್ದಾರೆ ಮತ್ತು ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ.

LEAVE A REPLY

Please enter your comment!
Please enter your name here