ಉತ್ತರಾಖಂಡ: ಉತ್ತರಾಖಂಡದ ಭೀಮತಾಲ್‌ನಿಂದ ಹಲ್ದ್ವಾನಿಗೆ ತೆರಳುತ್ತಿದ್ದ ಬಸ್ಸೊಂದು 500 ಅಡಿ ಆಳದ ಕಮರಿಗೆ ಉರುಳಿ ಬಿದ್ದ ಪರಿಣಾಮ ಮೂವರು ಮೃತಪಟ್ಟಿದ್ದು, 24 ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಗಾಯಾಗೊಂಡವರನ್ನು ಚಿಕಿತ್ಸೆಗಾಗಿ ಹಲ್ದ್ವಾನಿಯ ಆಸ್ಪತ್ರೆಗೆ ಸಾಗಿಸಲಾಗಿದೆ. ಹೆಚ್ಚಿನ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ಬಗ್ಗೆ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಆಡಳಿತ ರಕ್ಷಣಾ ಕಾರ್ಯಚರಣೆ ನಡೆಸುತ್ತಿದೆ ಎಂದು ಅವರು ತಿಳಿಸಿದ್ದಾರೆ.