ಪುರಿ: ಒಡಿಶಾದ ಜಾಜ್ ಪುರ ಜಿಲ್ಲೆಯಲ್ಲಿ ಬಸ್ಸೊಂದು ಸೇತುವೆಯಿಂದ ಕೆಳಗುರುಳಿ ಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ ಮತ್ತು ನಲವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕೊಲ್ಕತ್ತಾಗೆ ತೆರಳುತ್ತಿದ್ದ ಬಸ್ಸು ಬಾರಾಮತಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಘಟನಾ ಸ್ಥಳಕ್ಕೆ ಪೊಲೀಸರು, ವೈದ್ಯರು, ಜಿಲ್ಲಾಡಳಿತ ತಂಡ ಧಾವಿಸಿದೆ. ರಕ್ಷಣಾ ಕಾರ್ಯ ನಡೆದಿದೆದ. ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಗ್ಯಾಸ್ ಕಟರ್ ಮೂಲಕ ಬಸ್ಸಿನ ಬಾಗಿಲು ಮುರಿದು ಹೊರ ತೆಗೆದಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ. ಒಡಿಶಾ ಸಿಎಂ ನವೀನ್ ಪಾಟ್ನಾಯಕ್ ಪರಿಹಾರ ಘೋಷಿಸಿದ್ದಾರೆ. ಮೃತರಿಗೆ ಸಂತಾಪ ಸೂಚಿಸಿದ್ದಾರೆ.