Friday, March 21, 2025
Homeಬೆಂಗಳೂರುಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್‌: 42 ಭಕ್ತಾಧಿಗಳು ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್‌: 42 ಭಕ್ತಾಧಿಗಳು ಗಂಭೀರ

ಆನೇಕಲ್: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 42 ಭಕ್ತಾಧಿಗಳ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ನಡೆದಿದೆ.
ಇಂದು (ಡಿ.27) ಬಸ್ ಧರ್ಮಪುರಿ ಸಮೀಪದ ಇಟ್ಟಿಯಂಪಟ್ಟೆ ಗ್ರಾಮದಿಂದ ಹೋಗುತ್ತಿದ್ದ ಓಂ ಶಕ್ತಿ ದೇವಸ್ಥಾನಕ್ಕೆ ತೆರಳುತ್ತಿತ್ತು. ಈ ವೇಳೆ ಕೃಷ್ಣಗಿರಿ ಜಿಲ್ಲೆಯ ಉತಂಗರೈ ಚೆನ್ನಮಲೈ ಶಾಲೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಹಳ್ಳಕ್ಕೆ ಬಿದ್ದಿದೆ. ಈ ಅಪಘಾತದಿಂದ ದೇವಸ್ಥಾನಕ್ಕೆ ತೆರಳುತ್ತಿದ್ದ 42 ಭಕ್ತಾದಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ತಕ್ಷಣ ಸ್ಥಳೀಯರು ಗಾಯಳುಗಳನ್ನು ಸ್ಥಳೀಯ ಉತಂಗರೈ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಿಸಿದ್ದಾರೆ. ಅಪಘಾತದ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಉತಂಗರೈ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular