ಚಿಕ್ಕಮಗಳೂರು: ಚಲಿಸುತ್ತಿದ್ದ ಬಸ್ಸಿನ ಟಯರ್ ಏಕಾಏಕಿ ಕಳಚಿ ಬಿದ್ದ ಘಟನೆ ನಡೆದಿದೆ. ಚಲಿಸುತ್ತಿರುವಾಗಲೇ ಬಸ್ಸಿನ ಟಯರ್ ಕಳಚಿ ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಯಾವುದೇ ಅಪಾಯವಾಗದೆ ಪ್ರಯಾಣಿಕರು ಪಾರಾಗಿದ್ದಾರೆ.
ಎನ್‌ಆರ್ ಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣದ ರೋಟರಿ ಸರ್ಕಲ್‌ನಲ್ಲಿ ಈ ಘಟನೆ ನಡೆದಿದೆ. ಬಸ್ಸು ನಿಧಾನಗತಿಯಲ್ಲಿದ್ದ ಕಾರಣ ರಸ್ತೆಯಲ್ಲಿ ಬಸ್ಸು ಕೆಟ್ಟು ನಿಂತಿದೆ.
ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಸುಗಮ ಬಸ್ಸು ಸರ್ಕಲ್ ಬಳಿ ತಲುಪುವಾಗ ಈ ದುರಂತ ಸಂಭವಿಸಿದೆ. ಸರ್ಕಲ್ ಬಳಿ ಚಾಲಕ ಬಸ್ಸನ್ನು ನಿಧಾನಗತಿಯಲ್ಲಿ ಚಲಿಸುತ್ತಿದ್ದುದರಿಂದ ದೊಡ್ಡ ಅಪಾಯವೊಂದು ತಪ್ಪಿದೆ. ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ.