ಮಂಗಳೂರು: ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆದೊಯ್ದು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 68 ವರ್ಷದ ಉದ್ಯಮಿಯನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸದ್ಯ ಸಂತ್ರಸ್ತೆ ತಾಯಿ ನೀಡಿದ ದೂರು ಆಧರಿಸಿ ಮುಲ್ಕಿ ಠಾಣಾ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿಕೊಂಡಿದ್ದಾರೆ.
ಉದ್ಯಮಿ ಕಳೆದ ಎರಡು ತಿಂಗಳಿಂದ ಉದ್ಯಮಿ ಬಾಲಕಿಯನ್ನು ತನ್ನ ಕಾರಿನಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ. ಈ ವೇಳೆ ಬಾಲಕಿಯನ್ನ ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಮುಲ್ಕಿ ಪೊಲೀಸರು ಸಂತ್ರಸ್ತೆಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ತನಿಖೆ ನಡೆಸಿ ಆರೋಪಿಯನ್ನ ಬಂಧಿಸಿದ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆದರೆ ಅಧಿಕ ರಕ್ತದೊತ್ತಡಕ್ಕೆ ಒಳಗಾದ ಬಂಧಿತ ಆರೋಪಿಯನ್ನು ಮೂಲ್ಕಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.