ದಾವಣಗೆರೆ-ಜನವರಿ
ದಾವಣಗೆರೆಯ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರದ ໖. ವಾಮದೇವಪ್ಪನವರ ಜನಮದಿನದ 75ನೇ ವರ್ಷದ ವಜ್ರ ಮಹೋತ್ಸವವನ್ನು ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸರ್ವ ಪದಾಧಿಕಾರಿಗಳು, ನಿನ್ನೆ ದಿನ ನಗರದ ಕುವೆಂಪು ಕನ್ನಡ ಭವನದ ಕಛೇರಿಯಲ್ಲಿ ಸಂಭ್ರಮದಿಂದ ಆಚರಿಸ ಲಾಯಿತು ಎಂದು ಕಲಾಕುಂಚದ ಸಂಸ್ಥಾಪಕರಾದ ಗಣೇಶ್ ಶೆಣೈ ತಿಳಿಸಿದ್ದಾರೆ.

ಸಾಲಿಗ್ರಾಮ ಕಲಾಕುಂಚದ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್, ಕಲಾಕುಂಚ ಸಿದ್ಧವೀರಪ್ಪ ಬಡಾವಣೆ ಶಾಖೆಯ ಅಧ್ಯಕ್ಷರಾದ ಶ್ರೀಮತಿ ಲಲಿತಾ ಕಲ್ಲೇಶ್, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಶ್ರೀಮತಿ ಜ್ಯೋತಿ ಗಣೇಶ್ ಶೆಣೈ, ಗೌರವ ಅಧ್ಯಕ್ಷರಾದ ಶ್ರೀಮತಿ ವಸಂತಿ ಮಂಜುನಾಥ್, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ದಂಪತಿಯವರು ಸಮಿತಿ ಸದಸ್ಯರಾದ ಶ್ರೀಮತಿ ಕುಸುಮಾ ಲೋಕೇಶ್, ಚನ್ನಗಿರಿ ಭರತ್, ಬೇಳೂರು ಸಂತೋಷ್ ಕುಮಾರ್ ಶೆಟ್ಟಿ, ಶ್ರೀಮತಿ ಶೈಲಾ ವಿಜಯಕುಮಾರ ಶೆಟ್ಟಿ ದಂಪತಿಗಳು, ಶ್ರೀಮತಿ ಮಂಜುಳಾ ಸುನೀಲ್, ಶ್ರೀಮತಿ ಲಕ್ಷ್ಮೀ ಸುರೇಶ್, ಎಸ್.ಶಿವನಪ್ಪ ಶ್ರೀಮತಿ ಶಿವರುದ್ರಮ್ಮ ಮುಂತಾದವರು ಉಪಸ್ಥಿತರಿದ್ದರು. ಕ.ಸಾ.ಪ. ಜಿಲ್ಲಾಧ್ಯಕ್ಷರದ ಬಿ. ವಾಮದೇವಪ್ಪನವರು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಮೇಲೆ ಅಭಿಮಾನದಿಂದ ಸಂಸ್ಥೆಯ ಸಂಸ್ಥಾಪಕ ರಾದ ಸಾಲಿಗ್ರಾಮ ಗಣೇಶ್ ಶೆಣೈ, ಕಲಾ ಕುಂಚದ ಅಧ್ಯಕ್ಷರಾದ ಕೆ.ಹೆಚ್. ಮಂಜು ನಾಥ್ರವರಿಗೆ ಸನ್ಮಾನಿಸಿ ಗೌರವಿಸಿದರು.