ಕನ್ಯಾಡಿ ಸೇವಾನಿಕೇತನಕ್ಕೆ ಬೈಂದೂರು ಶಾಸಕರ ಭೇಟಿ

0
121

ಬೆಳ್ತಂಗಡಿ: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಸೆ 1 ರಂದು ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿದರು.

ಶಾಸಕರ ನೇತೃತ್ವದಲ್ಲಿ ಸಮೃದ್ಧ ಬೈಂದೂರು ಯೋಜನೆಯಡಿಯಲ್ಲಿ ಬೈಂದೂರು ತಾಲೂಕಿನ ಪಡುವರಿ ಗ್ರಾಮದ ಹೇನಬೇರು ಶಾಲೆಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಯ ನಿರ್ವಹಣೆ ಮತ್ತು ಪುನಶ್ಚೇತನ ಕೇಂದ್ರದ ಉದ್ದೇಶಿತ ಕಟ್ಟಡ “ಸೇವಾಧಾಮದ” ಬಗ್ಗೆ ಮಾಹಿತಿ ವಿನಿಮಯ ಮಾಡಲಾಯಿತು. ಹಾಗೂ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡ ನಿರ್ಮಾಣದ ಕಾರ್ಯವನ್ನು ವೀಕ್ಷಿಸಿ ಕಟ್ಟಡ ನಿರ್ಮಾಣ ಶೀಘ್ರವಾಗಿ ನೆರವೇರುವಂತೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here