ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೈಂದೂರು “ಯುವ ಕಾರ್ಯಾಗಾರ” ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ನಡೆಯಿತು. ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ರಾದ ದೀಪಕ್ ಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಂಡಲ ಯುವಮೋರ್ಚಾ ಅಧ್ಯಕ್ಷ ಗಜೇಂದ್ರ ಎಸ್. ಬೇಲೆಮನೆ, ಬೈಂದೂರು ಕ್ಷೇತ್ರದ ಚುನಾವಣಾ ಪ್ರಭಾರಿ ಅಶೋಕ್ ಮೂರ್ತಿ, ಸಂಪನ್ಮೂಲ ವ್ಯಕ್ತಯಾಗಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ, ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಪೃಥ್ವಿರಾಜ್ ಬಿಲ್ಲಾಡಿ , ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ, ಜಿಲ್ಲಾ ರೈತಮೋರ್ಚಾ ಪ್ರಧಾನಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ, ತಲ್ಲೂರ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಿರೀಶ್ ನಾಯ್ಕ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಪ್ರವೀಣ್ ಸೋಮಯ್ಯ,ಮಂಡಲ ಉಪಾಧ್ಯಕ್ಷ ರಾಘವೇಂದ್ರ ನೆಂಪು ಉಪಸ್ಥಿತರಿದ್ದರು.