Saturday, July 20, 2024
Homeರಾಜಕೀಯಬೈಂದೂರು : ಕಾಂಗ್ರೆಸ್ಸಿನ ಹಿರಿಯ ಕಾರ್ಯಕರ್ತ ತಿಮ್ಮ ದೇವಾಡಿಗ ಬಿಜೆಪಿಗೆ ಸೇರ್ಪಡೆ

ಬೈಂದೂರು : ಕಾಂಗ್ರೆಸ್ಸಿನ ಹಿರಿಯ ಕಾರ್ಯಕರ್ತ ತಿಮ್ಮ ದೇವಾಡಿಗ ಬಿಜೆಪಿಗೆ ಸೇರ್ಪಡೆ

ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯ ವೈಖರಿಯನ್ನು ಮೆಚ್ಚಿ ಬಿಜೆಪಿಯತ್ತ ಒಲವು ತೋರಿದ ಕಾಂಗ್ರೆಸ್ಸಿನ ಹಿರಿಯ ಕಾರ್ಯಕರ್ತ ಹಾಗೂ ಕೆರ್ಗಲ್ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ತಿಮ್ಮ ದೇವಾಡಿಗ ಅವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಬೈಂದೂರು ಮಂಡಲ ಕಛೇರಿಯಲ್ಲಿ ಪಕ್ಷದ ಧ್ವಜವನ್ನು ನೀಡಿ ಬಿಜೆಪಿಗೆ ಸೇರ್ಪಡೆಗೊಳಿಸಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಕೆ.ರಘುಪತಿ ಭಟ್, ಬಿಜೆಪಿ ಬೈಂದೂರು ಮಂಡಲಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಾದ ರಾಘವೇಂದ್ರ ಕುಂದರ್ ಜೆ.ಬಿ., ಪ್ರಿಯದರ್ಶಿನಿ ದೇವಾಡಿಗ, ಅನಿತಾ ಶ್ರೀಧರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಬೈಂದೂರು ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ಯಾಮಲಾ ಕುಂದರ್, ಬೈಂದೂರು ಮಹಾ ಶಕ್ತಿ ಕೇಂದ್ರದ ಪ್ರಭಾರಿ ಸುರೇಶ್ ಬಟ್ವಾಡಿ, ಶೀರೂರು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಜಗನ್ನಾಥ ಖಾರ್ವಿ, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular