ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಹಾಗೂ ಯು.ಬಿ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆ, ಬೈಂದೂರು ಇವರ ಸಹಯೋಗದಲ್ಲಿ 2024-25 ನೇ ಸಾಲಿನ ಬೈಂದೂರು ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವನ್ನು ಆಯೋಜಿಸಲಾಯಿತು.
ಯು.ಬಿ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಅಮಿತಾ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕ್ರೀಡೆ ವಿದ್ಯಾರ್ಥಿಗಳನ್ನು ದೈಹಿಕವಾಗಿ ಸದೃಢ ವಿದ್ಯಾರ್ಥಿಗಳ ಮಾನಸಿಕ ಬೆಳವಣಿಗೆ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಿದೆ.ಕ್ರೀಡೆ ಕೇವಲ ಪಠ್ಯೇತರ ಚಟುವಟಿಕೆಯಾಗಿ ಉಳಿಯದೆ ಹೊಸ ಶಿಕ್ಷಣ ನೀತಿಯಲ್ಲಿ ಪಠ್ಯವಾಗಿಯೂ ಸಹ ಬದಲಾಗಿರುವುದು ಗಣನೀಯ ಅಂಶವಾಗಿದೆ ಎಂದು ಹೇಳಿದರು.
ಬೈಂದೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಅರುಣ್ ಕುಮಾರ್ ಪ್ರಾಸ್ತಾವಿಕ ಮಾತನಾಡಿ
ಈ ಸಂಸ್ಥೆಯಲ್ಲಿ ಶಿಕ್ಷಣ ಇಲಾಖೆಯ ಕಾರ್ಯಕ್ರಮಗಳನ್ನು ಆಡಳಿತ ಮಂಡಳಿ ಯಶಸ್ವಿಯಾಗಿ ನಿಬಾಯಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬೈಂದೂರಿನ ಯುವಜನ ಕ್ರೀಡಾಧಿಕಾರಿಗಳು ಆಗಿರುವಂತಹ ಪ್ರಭಾಕರ್ ಎಸ್ ಹಾಗೂ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಕಾರ್ಯದರ್ಶಿಗಳಾದ ಗುರುರಾಜ್ ರವರು ಹಾಗೂ ಯು. ಬಿ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಕರಾದ ಮಂಜುನಾಥ ಮತ್ತು ರವಿರಾಜ್ ಉಪಸ್ಥಿತರಿದ್ದರು. ಈ ಪಂದ್ಯಾಟಕ್ಕೆ ವಿವಿಧ ಶಾಲೆಗಳಿಂದ ಬಾಲಕರ 18 ತಂಡಗಳು ಬಾಲಕಿಯರ 3 ತಂಡಗಳ ಕ್ರೀಡಾಪಟುಗಳು, ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಸಹ ಶಿಕ್ಷಕರು ಹಾಜರಿದ್ದರು. ಕಾರ್ಯಕ್ರಮವನ್ನು ಆಶಾ ನಾಯ್ಕ ನಿರೂಪಿಸಿದರು. ರೇಷ್ಮಾ ಸ್ವಾಗತಿಸಿದರು ಪ್ರತಿಮಾ ವಂದಿಸಿದರು.