ನವದೆಹಲಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ ವಿವಿಧ ರಾಜ್ಯಗಳಲ್ಲಿ ಹಲವೆಡೆ ದಾಳಿ ನಡೆಸಿದೆ.
ಈಗ ನಡೆದಿರುವ ದಾಳಿಯಲ್ಲಿ ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆ ಮತ್ತು ಬನಶಂಕರಿಯೂ ಸೇರಿದೆ. ಮಾ. 3ರಂದು ಎನ್ ಐಎ ತನಿಖೆ ಕೈಗೆತ್ತಿಕೊಂಡಿದೆ. ಏ. 12ರಂದು ಅಬ್ದುಲ್ ಮತೀನ್ ಅಹಮದ್ ತಾಹಾ ಸೇರಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆಯಿತು ಎಂದು ಎನ್ ಐಎ ಅಧಿಕಾರಿಗಳು ತಿಳಿಸಿದ್ದಾರೆ..
ಇದೇ ಗುಂಪಿಗೆಎ ಸೇರಿದ್ದ ಶಾರೀಕ್ ಎಂಬಾತ 2022, ನ.19ರಂಂದದು ಮಂಗಳೂರಿನಲ್ಲಿ ನಡೆದಿದ್ದ ಬಾಂಬ್ ಸ್ಫೋಟದ ರೂವಾರಿಯಾಗಿದ್ದ ಎಂದು ಅವರು ಮಾಹಿತಿ ನೀಡಿದ್ದಾರೆ.