6 ವರ್ಷದ ಮಗುವಿನ ಸಾವಿಗೆ ಕಾರಣವಾಯಿತೇ ಆನ್‌ಲೈನ್‌ನಲ್ಲಿ ತರಿಸಿದ್ದ ಕೇಕ್‌

0
702

ಬೆಂಗಳೂರು: ಆನ್‌ಲೈನ್‌ನಲ್ಲಿ ತರಿಸಿದ್ದ ಕೇಕ್ ತಿಂದು 6 ವರ್ಷದ ಮಗು ಸಾವನ್ನಪ್ಪಿದ ಶಂಕ ವ್ಯಕ್ತವಾಗಿದೆ. ಈ ಘಟನೆ ಬೆಂಗಳೂರು ನಗರದ ಕೆಪಿ ಅಗ್ರಹಾರದಲ್ಲಿ ನಡೆದಿದೆ.

ವಿನಯ್ (6) ಸಾವನ್ನಪ್ಪಿದ ಮಗು ಎಂದು ತಿಳಿದುಬಂದಿದೆ. ಕೇಕ್ ತಿಂದು ಮಂಗಳವಾರ ತೀವ್ರವಾಗಿ ಅಸ್ವಸ್ಥಗೊಂಡು ಇಂದು ಬೆಳಗ್ಗೆ ಸಾವನ್ನಪ್ಪಿದ.

ಕುಟುಂಬದಲ್ಲಿ ನಾಲ್ವರು ಇದ್ದು, ಒಂದು ಹೆಣ್ಣು ಮಗು ಸಂಬಂಧಿಕರ ಮನೆಗೆ ಹೋಗಿತ್ತು. ಮನೆಯಲ್ಲಿ ಮೂವರೇ ಇದ್ದ ಕಾರಣ ಮಂಗಳವಾರ ಸಂಜೆ ಆನ್‌ಲೈನ್‌ನಲ್ಲಿ ಕೇಕ್ ತರಿಸಿದ್ದರು. ಕೇಕ್ ತಿಂದ ಬಳಿಕ ಮಗು ತೀವ್ರವಾಗಿ ಅಸ್ವಸ್ಥಗೊಂಡು, ಬೆಳಿಗ್ಗೆ ಅಷ್ಟರಲ್ಲಿ ಸಾವನ್ನಪ್ಪಿತ್ತು. ಅದಾದ ಬಳಿಕ ತಂದೆ, ತಾಯಿ ಕೂಡ ಅಸ್ವಸ್ಥಗೊಂಡಿದ್ದರು. ಸದ್ಯ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸದ್ಯ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಬಳಿಕ ಎಫ್‌ಎಸ್‌ಎಲ್‌ಗೆ ರವಾನಿಸಲಿದ್ದಾರೆ. ಕಿಮ್ಸ್ ವೈದ್ಯರು ದೇಹದ ಇತರ ಭಾಗಗಳನ್ನು ಪರೀಕ್ಷೆಗೆ ಒಳಪಡಿಸಿ ಸಾವಿಗೆ ನಿಖರವಾದ ಕಾರಣವನ್ನು ಪತ್ತೆ ಹಚ್ಚಲಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here