ಬೆಂಗಳೂರು: ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5ರಂದು ಬೆಳಿಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಕೆಎಸ್ಆರ್ಟಿಸಿ ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಜನವರಿಯಲ್ಲೇ 4 ನಿಗಮದ ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಹೆಚ್ಚಳ ಮಾಡಬೇಕಿತ್ತು ಆದರೆ ಈವರೆಗೆ ಮಾಡಿಲ್ಲ. ಹೀಗಾಗಿ ಸರ್ಕಾರದ ನಡೆ ಖಂಡಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆಗಸ್ಟ್ 5ರಂದು ಬೆಳಿಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ
ಮುಷ್ಕರದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ಕಳಿಸಿದ್ದೇವೆ: ಅನಂತ ಸುಬ್ಬರಾವ್
ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಮುಷ್ಕರ ನಡೆಯಲಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸಾರಿಗೆ ಮುಷ್ಕರದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಮಂಗಳವಾರ ಇ-ಮೇಲ್ ಮೂಲಕ ಮುಷ್ಕರದ ನೋಟಿಸ್ ಕಳಿಸಿದ್ದೇವೆ ಎಂದು ತಿಳಿಸಿದ್ದಾರೆ.