ರಾಮನಗರ: ಇಲ್ಲಿನ ಕುಂಬಳಗೋಡು ರಾಜರಾಜೇಶ್ವರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇರಿಸಿ ವಿಡಿಯೋ ಚಿತ್ರೀಕರಣ ಮಾಡಿರುವ ಆರೋಪ ಕೇಳಿಬಂದಿದೆ. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಘಟನೆ ನಡೆದಿದ್ದು, ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಯುವಕನನ್ನು ಬಂಧಿಸುವಂತೆ ಆಗ್ರಹಿಸಲಾಗಿದೆ. ಸ್ಥಳಕ್ಕೆ ಕುಂಬಳಗೋಡು ಪೊಲೀಸರು ಭೇಟಿ ನೀಡಿದ್ದು, ಅನುಮಾನಾಸ್ಪದ ಯುವಕ ಮತ್ತು ಆತನ ಮೊಬೈಲನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ.
ವಿಷಯದ ಬಗ್ಗೆ ಕೇಳಿಬರುತ್ತಿದ್ದಂತೆ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ಯುವಕನನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ನ್ಯಾಯ ಬೇಕು ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಸದ್ಯ ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿದ್ದಾರೆ.