Friday, January 17, 2025
Homeದೆಹಲಿಲೈಂಗಿಕ ದೌರ್ಜನ್ಯ, ಅತ್ಯಾಚಾರ, ಆಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ: ದೆಹಲಿ ಹೈಕೋರ್ಟ್‌ ಮಹತ್ವದ...

ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಆಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ: ದೆಹಲಿ ಹೈಕೋರ್ಟ್‌ ಮಹತ್ವದ ಅದೇಶ

ನವದೆಹಲಿ: ಅತ್ಯಾಚಾರ, ಆಸಿಡ್ ದಾಳಿ ಮತ್ತು ಲೈಂಗಿಕ ದೌರ್ಜನ್ಯದಿಂದ ಬದುಕುಳಿದವರಿಗೆ ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ಉಚಿತ ವೈದ್ಯಕೀಯ ಚಿಕಿತ್ಸೆ ನಿರಾಕರಿಸುವಂತಿಲ್ಲ, ಲೈಂಗಿಕ ದೌರ್ಜನ್ಯಕ್ಕೊಳಗಾದವರಿಗೆ ಚಿಕಿತ್ಸೆ ನಿರಾಕರಿಸುವುದು ಅಪರಾಧವಾಗಿದ್ದು, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಮತ್ತು ಆಡಳಿತ ಮಂಡಳಿಗೆ ದಂಡ ವಿಧಿಸಬಹುದು ಎಂದು ದೆಹಲಿ ಹೈಕೋರ್ಟ್ ಮಹತ್ವದ ಅದೇಶ ನೀಡಿದೆ.
16 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆಯೇ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾ. ಪ್ರತಿಭಾ ಎಂ ಸಿಂಗ್ ಮತ್ತು ಅಮಿತ್ ಶರ್ಮಾ ಅವರ ಪೀಠ ಹಲವು ನಿರ್ದೇಶನಗಳನ್ನು ನೀಡಿದೆ. ಎಲ್ಲಾ ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು, ಕ್ಲಿನಿಕ್‌ಗಳು, ವೈದ್ಯಕೀಯ ಕೇಂದ್ರಗಳು ಅತ್ಯಾಚಾರ ಸಂತ್ರಸ್ತರು, ಬದುಕುಳಿದವರು, ಪೋಕ್ಸೋ ಪ್ರಕರಣದಲ್ಲಿ ಬದುಕುಳಿದವರು ಮತ್ತು ಲೈಂಗಿಕ ದಾಳಿಗಳಿಂದ ಬದುಕುಳಿದವರು ಇತ್ಯಾದಿಗಳಿಗೆ ಉಚಿತ ವೈದ್ಯಕೀಯ ಆರೈಕೆ ಮತ್ತು ಚಿಕಿತ್ಸೆಯನ್ನು ಒದಗಿಸುವುದು ಕರ್ತವ್ಯವಾಗಿದೆ ಎಂದು ನ್ಯಾಯಾಲಯ ಹೇಳಿದೆ.
ದೆಹಲಿಯ ಪ್ರತಿಯೊಂದು ಆಸ್ಪತ್ರೆಯೂ ವೈದ್ಯಕೀಯ ಸೌಲಭ್ಯಗಳ ಫಲಕ ಅಳವಡಿಸಬೇಕು, ಮುಖ್ಯವಾಗಿ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಸಾಮೂಹಿಕ ಅತ್ಯಾಚಾರ, ಆಸಿಡ್ ದಾಳಿಯ ಬಲಿಪಶುಗಳು, ಬದುಕುಳಿದವರಿಗೆ ಉಚಿತ ಹೊರರೋಗಿ ಮತ್ತು ಒಳರೋಗಿ ವೈದ್ಯಕೀಯ ಚಿಕಿತ್ಸೆ ಲಭ್ಯವಿದೆ ಎಂದು ತಿಳಿಸುವ ಬೋರ್ಡ್ ಹಾಕಬೇಕು. ಅಪರಾಧಗಳಲ್ಲಿ ಬದುಕುಳಿದವರನ್ನು ತಕ್ಷಣವೇ ಪರೀಕ್ಷಿಸಬೇಕು ಮತ್ತು ಅಗತ್ಯವಿದ್ದರೆ ಎಚ್‌ಐವಿಯಂತಹ ಲೈಂಗಿಕವಾಗಿ ಹರಡುವ ರೋಗಗಳಿಗೆ ಚಿಕಿತ್ಸೆ ನೀಡಬೇಕು ಎಂದು ನ್ಯಾಯಾಲಯ ಹೇಳಿದೆ.
ಅಲ್ಲದೆ, ಸಂತ್ರಸ್ತೆ, ಬದುಕುಳಿದವರಿಗೆ ದೈಹಿಕ ಮತ್ತು ಮಾನಸಿಕ ಸಮಾಲೋಚನೆ ನೀಡಬೇಕು. ತುರ್ತು ಸಂದರ್ಭಗಳಲ್ಲಿ ಸಂತ್ರಸ್ತೆಯನ್ನು ದಾಖಲಿಸಲು ಸಂಬಂಧಪಟ್ಟ ವೈದ್ಯಕೀಯ ಸಂಸ್ಥೆಯು ಗುರುತಿನ ಪುರಾವೆಯನ್ನು ಒತ್ತಾಯಿಸಬಾರದು ಎಂದು ನ್ಯಾಯಾಲಯ ನಿರ್ದೇಶಿಸಿದೆ.
ಮಗಳ ಮೇಲೆ ಅತ್ಯಾಚಾರವೆಸಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಆರೋಪಿಯ ಅರ್ಜಿಯ ವಿಚಾರಣೆಯ ವೇಳೆ ನ್ಯಾಯಾಲಯ ಈ ನಿರ್ದೇಶನ ನೀಡಿದೆ. ನ್ಯಾಯಾಲಯ ಮತ್ತು ದೆಹಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪುನರಾವರ್ತಿತ ಹಸ್ತಕ್ಷೇಪದ ಹೊರತಾಗಿಯೂ ಬದುಕುಳಿದವರು ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಕಾಯಬೇಕಾಯಿತು ಎಂಬ ಅಂಶವನ್ನು ನ್ಯಾಯಾಲಯ ಗಮನಿಸಿದೆ.

RELATED ARTICLES
- Advertisment -
Google search engine

Most Popular