Sunday, July 14, 2024
Homeರಾಜಕೀಯದೆಹಲಿಗೆ ತೆರಳುವ ಮುನ್ನ ಬಿಎಸ್‌ವೈ ಮಾರ್ಗದರ್ಶನ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

ದೆಹಲಿಗೆ ತೆರಳುವ ಮುನ್ನ ಬಿಎಸ್‌ವೈ ಮಾರ್ಗದರ್ಶನ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಲೋಕಸಭೆ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಬಿಜೆಪಿಯ ಸಂಸದರಿಗೆ ಹೈಕಮಾಂಡ್ ಬುಲಾವ್ ಕೊಟ್ಟಿದ್ದು ಈ ಸಭೆಯಲ್ಲಿ ಭಾಗವಹಿಸಲು ದೆಹಲಿ ಕಡೆ ಪ್ರಯಾಣ ಬೆಳೆಸಿರುವ ಮಧ್ಯದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರನ್ನು ಅವರ ಬೆಂಗಳೂರಿನ ನಿವಾಸದಲ್ಲಿ ಭೇಟಿಯಾಗಿ ರಾಜ್ಯದಲ್ಲಿ ಚುನಾವಣೆಯ ಯಶಸ್ವಿ ನಿರ್ವಹಣೆಗೆ ಅಭಿನಂದಿಸಿದರು. ಆ ಬಳಿಕ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಅವರ ಬೆಂಗಳೂರಿನ ನಿವಾಸಕ್ಕೆ ಭೇಟಿ ನೀಡಿ ಅವರ ಮಾರ್ಗದರ್ಶನ ಪಡೆದರು ಇದಾದ ನಂತರ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಭೇಟಿ ನೀಡಿ ದೆಹಲಿ ಕಡೆ ಪ್ರಯಾಣಿಸಿದರು.

ಎನ್. ಡಿ.ಎ. ಮೈತ್ರಿಕೂಟದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದು ಈ ಸಮಾರಂಭದಲ್ಲಿ ಭಾಗವಹಿಸಿ ಮಂಗಳೂರಿಗೆ ವಾಪಸ್ ಆಗುವ ಮಾಹಿತಿ ಇದೆ.

RELATED ARTICLES
- Advertisment -
Google search engine

Most Popular