ಉಳ್ಳಾಲ: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು ಬಳಿಕ ರಸ್ತೆ ಬದಿಗೆ ಹಾಕಿದ್ದ ಕಬ್ಬಿಣ ತಡೆಬೇಲಿಗೆ ಸಿಲುಕಿ ತಲೆಕೆಳಗಾಗಿ ನಿಂತ ಘಟನೆ ತೊಕ್ಕೊಟ್ಟು ಬಬ್ಬುಕಟ್ಟೆ ಬಳಿಯಲ್ಲಿ ನಡೆದಿದೆ.
ಕಾರಿನಲ್ಲಿದ್ದ ವೈದ್ಯಕೀಯ ವಿದ್ಯಾರ್ಥಿಗಳು ಪವಾಡಸದೃಶವಾಗಿ ಪಾರಾಗಿದ್ದಾರೆ. ಅಪಘಾತದಿಂದ ಎಚ್.ಟಿ. ಲೈನ್ ವಿದ್ಯುತ್ ಕಂಬ ಮುರಿದುಬಿದ್ದಿದೆ.
ದೇರಳಕಟ್ಟೆಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ತೊಕ್ಕೊಟ್ಟು ಕಡೆಯಿಂದ ದೇರಳಕಟ್ಟೆಗೆ ಸಾಗುತ್ತಿದ್ದರು. ಟಿಪ್ಪರ್ ಒಂದನ್ನು ಓವರ್ ಟೇಕ್ ಮಾಡುವ ವೇಳೆ ಈ ಅಪಘಾತ ಸಂಭವಿಸಿದೆ. ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.