ಪುಂಜಾಲಕಟ್ಟೆ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಹೆದ್ದಾರಿ ಬದಿಯ ತೋಟವೊಂದಕ್ಕೆ ಬಿದ್ದ ಘಟನೆ ಬಿ.ಸಿ. ರೋಡು-ಬೆಳ್ತಂಗಡಿ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ. ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಕೊಡಿಯಾಲ್‌ಬೈಲ್ ನಿವಾಸಿ ಭಾಗೀರಥಿ (58) ಮೃತಪಟ್ಟ ಮಹಿಳೆಯಾಗಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ರೂಪೇಶ್ (40) ಎಂಬವರಿಗೆ ಗಂಭೀರ ಗಾಯಗಳಾಗಿವೆ. ರೂಪೇಶ್ ಅವರ ಪತ್ನಿ ಸುಚಿತ್ರಾ (33) ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೂಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಕಾರು ಮುಂಜಾನೆ ಸುಮಾರು 4.30ರ ಸುಮಾರಿಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿದೆ.
ಮೂಲತಃ ಮಂಗಳೂರು ಕೊಡಿಯಾಲಬೈಲು ನಿವಾಸಿ ಪಿಡಬ್ಲ್ಯೂಡಿ ಎಂಜಿನಿಯರ್ ಗೋಪಾಲ್ ಅವರ ಸಹೋದರಿ ಭಾಗೀರಥಿ ಅವರು ತಮ್ಮ ಪುತ್ರಿ ಸುಚಿತ್ರಾ ಮತ್ತು ಅಳಿಯ ರೂಪೇಶ್ ಜೊತೆ ಪ್ರಯಾಣಿಸುತ್ತಿದ್ದರು. ರೂಪೇಶ್ ತುಮಕೂರು ಜಿಲ್ಲೆಯವರಾಗಿದ್ದು, ಭಾಗೀರಥಿ ಅವರು ದಸರಾ ರಜೆಯಲ್ಲಿ ಅಳಿಯ ಮಗಲ ಜೊತೆ ತುಮಕೂರಿಗೆ ಹೋಗಿ ವಾಪಾಸ್ ಮಂಗಳೂರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.