ವಿದ್ಯುತ್ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಕಾರು ನಜ್ಜುಗುಜ್ಜು

0
31

ಮಂಗಳೂರು : ನಿಯಂತ್ರಣ ತಪ್ಪಿದ ಟೂರಿಸ್ಟ್ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರಿನ ಮರೋಳಿ ಸಮೀಪ ನಡೆದಿದೆ.

ಟೂರಿಸ್ಟ್ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ವಿದ್ಯುತ್ ಕಂಬವೇ ಬುಡಸಮೇತ ಕಿತ್ತುಬಂದಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಘಟನೆಯ ವೇಳೆ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ನೆರವಿನಿಂದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.

ಅಪಘಾತದ ಪರಿಣಾಮ ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಗೆ ನಿಖರ ಕಾರಣ ತಿಳಿದುಬರಬೇಕಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.