ಉಡುಪಿ: ಇಲ್ಲಿನ ಕುಂಜಿಬೆಟ್ಟು ಹೋಂಡಾ ಶೋರೂಮ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ಮನೆಯ ಆವರಣ ಗೋಡೆಗೆ ಗುದ್ದಿದ ಘಟನೆ ನಡೆದಿದೆ.
ಮಣಿಪಾಲದಿಂದ ಉಡುಪಿಗೆ ಕಡೆಗೆ ಬರುತ್ತಿದ್ದ ಕೇರಳ ನೋಂದಣಿ ಸಂಖ್ಯೆ ಹೊಂದಿರುವ ಕಾರು ಅಪಘಾತಕ್ಕೀಡಾಗಿದೆ ಎಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

