ಬರ್ಲಿನ್: ಜರ್ಮನಿಯ ಮ್ಯಾಗ್ಡೆಬರ್ಗ್‌ನ ಕ್ರಿಸ್‍ಮಸ್ ಮಾರುಕಟ್ಟೆಯಲ್ಲಿ ಜನರ ಗುಂಪಿನ ಮೇಲೆ ಕಾರು ನುಗ್ಗಿದ ಪರಿಣಾಮ ಇಬ್ಬರು ಸಾವನ್ನಪ್ಪಿ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ದಾಳಿ ನಡೆಸಿದ ಶಂಕಿತ ಕಾರು ಚಾಲಕ 50 ವರ್ಷ ವಯಸ್ಸಿನ ವೈದ್ಯ, ಮೂಲತಃ ಸೌದಿ ಅರೇಬಿಯಾದವನು ಎನ್ನಲಾಗಿದೆ. ಈತ ಜರ್ಮನಿಯ ಖಾಯಂ ನಿವಾಸಿ ಕಾರ್ಡ್ ಪಡೆದಿದ್ದ. ಘಟನೆ ಬಳಿಕ ಈತನನ್ನ ಬಂಧಿಸಲಾಗಿದೆ ಎಂದು ವರದಿಯಾಗಿದೆ.
ನಮಗೆ ತಿಳಿದಂತೆ ಆತನೊಬ್ಬನೇ ದಾಳಿಕೋರ ಎಂದು ನಂಬಲಾಗಿದೆ. ನಗರಕ್ಕೆ ಬೇರೆ ಯಾವುದೇ ಅಪಾಯ ಇಲ್ಲ ಎಂದು ಸ್ಯಾಕ್ಸೋನಿ-ಅನ್ಹಾಲ್ಟ್ ಗವರ್ನರ್ ರೀನರ್ ಹಸ್ಲೋಫ್ ಸ್ಪಷ್ಟಪಡಿಸಿದ್ದಾರೆ.
ಕಪ್ಪು ಬಣ್ಣದ ಕಾರೊಂದು ಜನದಟ್ಟಣೆಯಿದ್ದ ಕಡೆಗೆ ರಭಸದಿಂದ ನುಗ್ಗಿದೆ. ಭಯಭೀತರಾದ ಜನತೆ ಅಡ್ಡಾದಿಡ್ಡಿಯಾಗಿ ಓಡಿಸಿದ ಪರಿಣಾಮ ದುರಂತ ಸಂಭವಿಸಿರುವುದು ಕಂಡುಬಂದಿದೆ. ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಅಂಬುಲೆನ್ಸ್‌ಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಜರ್ಮನಿಯ ಕ್ರಿಸ್ಮಸ್ ಮಾರುಕಟ್ಟೆಯಲ್ಲಿ ಜನರ ಗುಂಪಿನ ಮೇಲೆ ಹರಿದ ಕಾರು: ಇಬ್ಬರು ಸಾವು, 60 ಮಂದಿಗೆ ಗಾಯ
RELATED ARTICLES