ದಾರವಾಡ: ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಅಮ್ಮಿನಭಾವಿ ಗ್ರಾಮದ ಬಳಿಯ ಸವದತ್ತಿ ರಸ್ತೆಯಲ್ಲಿ ನಡೆದಿದೆ.
ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಧಾರವಾಡ ಗ್ರಾಮೀಣ ಪೊಲೀಸರು ತಿಳಿಸಿದ್ದಾರೆ.
ಸವದತ್ತಿ ಕಡೆಯಿಂದ ಧಾರವಾಡ ಕಡೆಗೆ ಬರುತ್ತಿದ್ದ ಕಾರು ಸವದತ್ತಿ ಕಡೆಗೆ ಹೋಗುವ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಸವದತ್ತಿ ಯಲ್ಲಮ್ಮ ದೇವಿಯ ದರ್ಶನಕ್ಕೆ ಹೊರಟಿದ್ದ ಟ್ರ್ಯಾಕ್ಟರ್‌ನಲ್ಲಿನ ಪ್ರಯಾಣಿಕರು ಗಾಯಗೊಂಡಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ.
ಗಾಯಾಳುಗಳನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದಾರೆ.