ಪಡುಬಿದ್ರೆ ಬಳಿ ಕಾರು–ದ್ವಿಚಕ್ರ ವಾಹನ ಡಿಕ್ಕಿ : ದ್ವಿಚಕ್ರ ವಾಹನ ಸವಾರ ಚಿಕಿತ್ಸೆ ಫಲಿಸದೆ ಸಾವು

0
19

ಪಡುಬಿದ್ರೆ : ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಪಡುಬಿದ್ರೆ ಜಂಕ್ಷನ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ಕಾಪು ತಾಲೂಕು ನಾಲು ಗ್ರಾಮದ ನಿವಾಸಿ ನಿರಂಜನ ಹೊಳ್ಳ (45) ಎಂದು ಗುರುತಿಸಲಾಗಿದೆ. ಬೆಳಗ್ಗೆ ಸುಮಾರು 11.30ರ ವೇಳೆಗೆ ಪಡುಬಿದ್ರೆ ಜಂಕ್ಷನ್ ಬಳಿ ಕಿರಣ್ ಕುಮಾರ್ ಚಲಾಯಿಸುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಮೇತ ರಸ್ತೆಗೆ ಬಿದ್ದ ನಿರಂಜನ ಹೊಳ್ಳ ಅವರಿಗೆ ಗಂಭೀರ ಗಾಯಗಳಾಗಿದ್ದು ತಕ್ಷಣ ಅವರನ್ನು ಪಡುಬಿದ್ರೆಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅಪಘಾತದ ಕುರಿತು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.