spot_img
30.6 C
Udupi
Monday, September 25, 2023
spot_img
spot_img
spot_img

ಮೂಡುಬಿದಿರೆ:”ಹೃದಯ ತಜ್ಞ ಮನೆ ಬಾಗಿಲಿಗೆ” ಹೃದಯ ಸಂಬಂಧಿತ ಕಾಯಿಲೆಗಳಿಗೆ ಉಚಿತ ತಪಾಸಣಾ ಶಿಬಿರ

ಮೂಡುಬಿದಿರೆ: ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ,ಮಂಗಳೂರು ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಕಾರ್ಡಿಯಾಲಜಿ ಡೋರ್‌ಸ್ಟೆಪ್ ಫೌಂಡೇಶನ್ ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹೃದಯ ತಜ್ಞ ಡಾ| ಪದ್ಮನಾಭ ಕಾಮತ್ ಹಾಗೂ ತಂಡದಿಂದ ಹೃದಯ ವೈಶಾಲ್ಯ ಯೋಜನೆ “ಹೃದಯ ತಜ್ಞ ಮನೆ ಬಾಗಿಲಿಗೆ” ಹೃದಯ ಸಂಬಂಧಿತ ಕಾಯಿಲೆಗಳಿಗೆ ಉಚಿತ ತಪಾಸಣಾ ಶಿಬಿರ ಬುಧವಾರ ಮೂಡುಬಿದಿರೆ ಆರೋಗ್ಯ ಕೇಂದ್ರದಲ್ಲಿ ನಡೆಯಿತು.


ದ.ಕ ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಕುಮಾರ್ ಅವರು ಹೃದಯ ವೈಶಾಲ್ಯ ಯೋಜನೆಗೆ ಚಾಲನೆ ನೀಡಿ ಮಾತನಾಡಿ ಗ್ರಾಮೀಣ ಭಾಗದ ಜನರ ಆರೋಗ್ಯದ ದೃಷ್ಠಿಯಿಂದ ವೈದ್ಯಕೀಯ ಸೌಲಭ್ಯಗಳು ಗ್ರಾಮೀಣ ಪ್ರದೇಶದ ಜನರ ಮನೆ ಬಾಗಿಲಲ್ಲೇ ಸಿಗಬೇಕೆನ್ನುವ ನಿಟ್ಟಿನಲ್ಲಿ ಹೃದಯ ವೈಶಾಲ್ಯ ಯೋಜನೆಯನ್ನು ಜಾರಿಗೊಳಿಸಲಾಗಿದೆ.ಹೃದಯ ವೈಶಾಲ್ಯ ಯೋಜನೆಯ ಸೂತ್ರಧಾರಿ ಹೃದಯ ತಜ್ಞ ಡಾ| ಪದ್ಮನಾಭ ಕಾಮತ್ ಅವರ ಚಿಂತನೆಯಲ್ಲಿ ಮೂಡಿ ಬಂದ ಹೃದಯ ವೈಶಾಲ್ಯ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಪ್ರತೀ ಬುಧವಾರ ತಜ್ಞ ವೈದ್ಯರು ಸಂಬಂಧಪಟ್ಟ ಪ್ರಾಥಮಿಕ ಆರೋಗ್ಯಕೇಂದ್ರ ಅಥವಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದು ಉಚಿತವಾಗಿ ತಪಾಸಣೆಯನ್ನು ನಡೆಸಲಾಗುತ್ತಿದ್ದು ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದ ಅವರು ಹೃದಯ ವೈಶಾಲ್ಯ ಯೋಜನೆ ಇಡೀ ದೇಶದಲ್ಲೇ ಮೊದಲ ಬಾರಿಗೆ ಜಾರಿ ತರಲಾಗಿದ್ದು, ಈ ಕುರಿತು ರಾಜ್ಯದ ಪ್ರಧಾನ ಕಾರ್ಯದರ್ಶಿಯವರ ಗಮನಕ್ಕೆ ತರಲಾಗಿದೆ ಎಂದರು.

ಹೃದಯ ತಜ್ಞ ಡಾ|ಪದ್ಮನಾಭ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿ,ಹೃದಯ ವೈಶಾಲ್ಯ ಯೋಜನೆ ಜಿಲ್ಲೆಗೆ ಮಾತ್ರ ಸೀಮಿತವಾಗದೇ, ರಾಜ್ಯ ಮಟ್ಟದಲ್ಲಿ ಬೆಳೆಯಲಿ ಎನ್ನುವ ಆಶಯವಿದೆ. ಈ ಯೋಜನೆಯನ್ನು ಯಶಸ್ವಿಗೊಳಿಸುವ ಜವಾಬ್ದಾರಿ ಊರಿನ ಜನರು ಹಾಗೂ ಆರೋಗ್ಯಾಧಿಕಾರಿಗಳ ಮೇಲಿದೆ. ಪ್ರತಿಯೊಂದು ಊರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಎಚ್‌ಓ ಹಾಗೂ ಇಲ್ಲಿನ ಆರೋಗ್ಯಾಧಿಕಾರಿಗಳು ಈ ಕರ್ತವ್ಯವನ್ನು ನಿರ್ವಹಿಸಲಿದ್ದಾರೆ. ಈ ಯೋಜನೆಯನ್ನು ಮುಂದೆಯೂ ಎಲ್ಲಾ ಕಡೆಗಳಲ್ಲಿ ಅನುಷ್ಠಾನ ತರಲಾಗುವುದು ಎಂದರು.
ಪುರಸಭಾ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಪುರಸಭಾ ಸದಸ್ಯೆ ಶ್ವೇತಾ ಕುಮಾರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ನೋಡಲ್ ಅಧಿಕಾರಿ ಡಾ| ಜಗದೀಶ್, ಮಂಗಳೂರು ತಾಲೂಕು ಆರೋಗ್ಯಧಿಕಾರಿ ಸುಜಯ್, ಪುರಸಭಾ ಮುಖ್ಯಾಧಿಕಾರಿ ಶಿವ ನಾಯ್ಕ್ , ವಕೀಲ ಬಾಹುಬಲಿ ಪ್ರಸಾದ್, ಮತ್ತಿತರ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ| ಚಿತ್ರ ಸ್ವಾಗತಿಸಿದರು. ಕ್ಷೇತ್ರ ಆರೋಗ್ಯಧಿಕಾರಿ ಸುಶೀಲ ನಿರೂಪಿಸಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕುಮಾರ್ ಧನ್ಯವಾದಗೈದರು.

Related Articles

Stay Connected

0FansLike
3,870FollowersFollow
0SubscribersSubscribe
- Advertisement -

Latest Articles