ಪಡುಬಿದ್ರಿ: ಬಸ್ಸು ಚಾಲಕನಿಗೆ ಹಲ್ಲೆ ನಡೆಸಿದ ಪ್ರಕರಣದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಪ್ರಕರಣ ದಾಖಲಾಗಿದೆ. ಪಡುಬಿದ್ರೆಯಲ್ಲಿ ಇಂದು ಓವರ್ ಟೇಕ್ ವಿಷಯದಲ್ಲಿ ಬಸ್ಸು ಚಾಲಕ ಶೈಲೇಂದ್ರ ಎಂಬವರಿಗೆ ಕಾರು ಚಾಲಕ ಮುಲ್ಕಿಯ ಇಸ್ಮಾಯಿಲ್ ಅತೀಕ್ ಎಂಬಾತ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಇಂದು ಬೆಳಿಗ್ಗೆ ಪಡುಬಿದ್ರೆಯಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಬಸ್ಸು ಚಾಲಕನಿಗೆ ಚೂರಿ ಇರಿತ ಎಂದು ಸುಳ್ಳು ಸುದ್ದಿ ಹರಡಿಸಲಾಗಿತ್ತು. ಹೀಗಾಗಿ ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಪಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಪಡುಬಿದಿರೆ: ಬಸ್ಸು ಚಾಲಕನಿಗೆ ಚೂರಿ ಇರಿತವೆಂದು ಸುಳ್ಳು ಸುದ್ದಿ ಹರಡಿದವರ ವಿರುದ್ಧ ಪ್ರಕರಣ ದಾಖಲು
RELATED ARTICLES