Monday, January 13, 2025
Homeಮಂಗಳೂರುಚಾರ್ಮಾಡಿ ಮೃತ್ಯುಂಜಯ ನದಿಯಲ್ಲಿ ದನದ ಮಾಂಸದ ತ್ಯಾಜ್ಯಗಳನ್ನು ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಚಾರ್ಮಾಡಿ ಮೃತ್ಯುಂಜಯ ನದಿಯಲ್ಲಿ ದನದ ಮಾಂಸದ ತ್ಯಾಜ್ಯಗಳನ್ನು ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ ; ಧರ್ಮಸ್ಥಳ ಠಾಣೆ ವ್ಯಾಪ್ತಿಯ ಚಾರ್ಮಾಡಿ ಗ್ರಾಮದ ಅನ್ನಾರು ಎಂಬಲ್ಲಿನ ಚಾರ್ಮಾಡಿ ಮೃತ್ಯುಂಜಯ ನದಿಯಲ್ಲಿ ದನದ ಮಾಂಸದ ತ್ಯಾಜ್ಯಗಳನ್ನು ಎಸೆದ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಚಾರ್ಮಾಡಿ ಗ್ರಾಮದ ಕತ್ರಿಗುಡ್ಡೆ ನಿವಾಸಿ ಮೊಹಮ್ಮದ್ ಇರ್ಷಾದ್ (28) ಹಾಗೂ ಕುವೆಟ್ಟು ಗ್ರಾಮದ ಸುನ್ನತ್ ಕೆರೆ ನಿವಾಸಿ ಮಹಮ್ಮದ್ ಅಜ್ಜಲ್ (30)ಬಂಧಿತ ಆರೋಪಿಗಳಾಗಿದ್ದಾರೆ.

ಜ 17ರಂದು ಮೃತ್ಯುಂಜಯ ನದಿಯ ಬದಿಯಲ್ಲಿ ಕಿಡಿಗೇಡಿಗಳು ಹತ್ಯೆಗೈದ ಜಾನುವಾರುಗಳ ತಲೆ ಹಾಗೂ ಇತರೆ ತ್ಯಾಜ್ಯಗಳನ್ನು ಗೋಣಿ ಚೀಲಗಳಲ್ಲಿ ತುಂಬಿ ಎಸೆದು ಹೋಗಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

RELATED ARTICLES
- Advertisment -
Google search engine

Most Popular