Saturday, April 26, 2025
Homeಬೆಳ್ತಂಗಡಿಮಹೇಶ್‌ ಶೆಟ್ಟಿ ತಿಮರೋಡಿ ಹಾಗೂ ಅವರ ಅನುಯಾಯಿಗಳ ವಿರುದ್ಧ ಕೇಸ್‌ ದಾಖಲು

ಮಹೇಶ್‌ ಶೆಟ್ಟಿ ತಿಮರೋಡಿ ಹಾಗೂ ಅವರ ಅನುಯಾಯಿಗಳ ವಿರುದ್ಧ ಕೇಸ್‌ ದಾಖಲು

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೋಲೀಸ್‌ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ದಿನಾಂಕ 08-02-2025 ರಂದು ಬೆಳ್ತಂಗಡಿಯಲ್ಲಿ ನಡೆದ ಹಿಂದೂ ಸಮಾಜ ರಕ್ಷಣಾ ಕಾರ್ಯಕ್ರಮದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ದೇವಾಲಯಗಳ ಬಗ್ಗೆ ಜನರಲಕ್ಲಿ ಅನುಮಾನ ಹುಟ್ಟಿಸುವ ಹೇಳಿಕೆಗಳನ್ನ ನೀಡಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಹೇಳಿಕೆಗಳನ್ನ ನೀಡಿದ್ದಾರೆಂದು ದೂರು ದಾಖಲಾಗಿದ್ದು, ಠಾಣೆಯಲ್ಲಿ ಎಫ್‌ ಐ ಆರ್‌ ದಾಖಲಾಗಿದೆ.

ʼಒಬ್ಬ ಅಧರ್ಮಿಯಿಂದ ಧರ್ಮ ನಾಶವಾಗುತ್ತಿದೆ, ಇಂದು ಧಾರ್ಮಿಕ ಸ್ಥಳಗಳಿಗೆ ಮತ್ತು ಹಿಂದೂ ಸಮಾಜಕ್ಕೆ ಅಧರ್ಮಿಗಳ ಪ್ರಭಾವ ಹೆಚ್ಚಾಗಿದೆ. ನಾವು ನಮ್ಮ ಸಂಪ್ರದಾಯವನ್ನು ಉಳಿಸಿಕೊಳ್ಳಬೇಕಾದ ಸಮಯ ಬಂದಿದೆ. ಅಧರ್ಮಿಯರ ದುಡ್ಡು ತಂದು ಧರ್ಮಸ್ಥಳ ಮಾತ್ರವಲ್ಲ, ಉಡುಪಿ ದೇವಾಲಯಗಳು ಇರಿಸಿಕೊಳ್ತಿದ್ದಾರೆ ʼ ಎಂಬ ಹೇಳಿಕೆಯ ಆಧಾರದ ಮೇಲೆ ಕೇಸ್‌ ದಾಖಲಾಗಿದೆ.

ಈ ಹಿಂದೆ ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯ WP ಸಂಖ್ಯೆ 19382/2023ಯ ಅದೇಶದಲ್ಲಿ , ಸಾರ್ವಜನಿಕ ಸಭೆಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬ ,ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳು ಹಾಗೂ ಮುಂದಿನ ಯೋಜನೆಗಗಳ ಬಗ್ಗೆ ಯಾವುದೇ ಅಪಪ್ರಚಾರ ಅಥವಾ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಆದೇಶಿಸಿತ್ತು. ಇದರ ಹೊರತಾಗಿಯೂ ಮಹೇಶ್‌ ಶೆಟ್ಟಿ ತಿಮರೋಡಿ ಧರ್ಮಸ್ಥಳದ ಬಗ್ಗೆ ಹೇಳಿಕೆಗಳನ್ನ ನೀಡಿದ್ದು, ಶ್ರೀ ಕ್ಷೇತ್ರದ ಭಕ್ತರು ಮನನೊಂದು ಬೆಳ್ತಂಗಡಿ ಪೋಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

RELATED ARTICLES
- Advertisment -
Google search engine

Most Popular