ಗೋ ಹತ್ಯೆ ಬಗ್ಗೆ ಸುಳ್ಳು ಮಾಹಿತಿ ರವಾನೆ: ಕಿಡಿಗೇಡಿ ವಿರುದ್ಧ ಪ್ರಕರಣ ದಾಖಲು

0
94


ಬಂಟ್ವಾಳ: ಪುದು ಗ್ರಾಮದ ಮಾರಿಪಳ್ಳ ಪಾಡಿಯಲ್ಲಿರುವ ಅಕ್ರಮ ಕಸಾಯಿಖಾನೆ ಮೇಲೆ ದಾಳಿ ಮಾಡಿ ಗೋಮಾಂಸ ವಶಪಡಿಸಿಕೊಳ್ಳಲಾಗಿದೆ ಎಂದು ವಾಟ್ಸಾಪ್ ಗ್ರೂಪ್‌ನಲ್ಲಿ ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ (Crime) ಬಂಟ್ವಾಳ ಗ್ರಾಮಾಂತರ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮುಸ್ಲಿಂ ವಾಯ್ಸ್ ವಾಟ್ಸಾಪ್ ಗ್ರೂಪ್‌ನಲ್ಲಿ ರಾಯಲ್ ಜಕೀರ್ ಎಂಬ ಹೆಸರನ್ನು ಬಳಸಿಕೊಂಡು ಆರೋಪಿಗಳು ಸಾರ್ವಜನಿಕರಲ್ಲಿ ಭಯ ಮತ್ತು ಅಶಾಂತಿಯನ್ನು ಉಂಟುಮಾಡುವ ದಾರಿತಪ್ಪಿಸುವ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾರಿಪಳ್ಳ ಪಾಡಿಯಲ್ಲಿರೋ ಅಕ್ರಮ ಕಸಾಯಿಖಾನೆಯಲ್ಲಿ ಕಾನೂನುಬಾಹಿರವಾಗಿ ಗೋಹತ್ಯೆ ನಡೆಸಲಾಗುತ್ತಿದೆ ಅನ್ನೋ ಸುದ್ದಿ ತಿಳಿಯುತ್ತಿದ್ದಂತೆಯೇ ಪ್ರಕರಣ ದಾಖಲಿಸಲಾಗಿತ್ತು. ಘಟನೆಯ ಸಂಬಂಧ ಆರೋಪಿಗಳಿಗೆ ಸೇರಿದ ಆಸ್ತಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಯಾವಾಗ ಪೊಲೀಸರು ಆಸ್ತಿ ಮುಟ್ಟುಗೋಲಿಗೆ ನಿಂತ್ರೋ ‘ಮುಸ್ಲಿಂ ವಾಯ್ಸ್’ ಎಂಬ ವಾಟ್ಸಾಪ್ ಗ್ರೂಪ್‌ನಲ್ಲಿ, ರಾಯಲ್ ಜಕೀರ್ ಹೆಸರಿನಲ್ಲಿ ನೋಂದಣಿಯಾದ ಮೊಬೈಲ್ ನಂಬರ್ ಬಳಸಿಕೊಂಡು, ವ್ಯಕ್ತಿಯೊಬ್ಬ ಆಕ್ಷೇಪಾರ್ಹ ಮಾಹಿತಿ ಹಂಚಿಕೊಂಡಿದ್ದ. ಸದ್ಯ ಪೊಲೀಸರು ಬಿಎನ್‌ಎಸ್ ಸೆಕ್ಷನ್ 353(2) ಮತ್ತು 240 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಭಾನುವಾರ ಮುಂಜಾನೆ ಕಲ್ಲಡ್ಕ ಮದಕ ಬಳಿ ಬಂಟ್ವಾಳ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಂದಾಜು 2 ಕಿಂಟ್ಟಾಲ್ ಗೋ ಮಾಂಸ, ಒಂದು ಆಟೋ, ಆಲ್ಟೋ ಕಾರು ಹಾಗೂ ಬೈಕ್ ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದ.
ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ಪುದು ಗ್ರಾಮದ ಮಾರಿಪಳ್ಳ ನಿವಾಸಿಯಾದ ಹಸನಬ್ಬ ಎಂಬುವವರು ಗೋ ಕಳವು, ಗೋವಧೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಯಾಗಿದ್ದು, ಆತನ ಮೇಲೆ ಗೋಸಂರಕ್ಷಣಾ ಕಾಯಿದೆ ಮತ್ತು ಗೋಹತ್ಯೆ ನಿಷೇಧ ಕಾಯಿದೆಯಡಿ ದಾಖಲಾದ ಪ್ರಕರಣದಲ್ಲಿ ದಸ್ತಗಿರಿ ಮಾಡಿ ಮಾನ್ಯ ಎಸಿಜೆ ಮತ್ತು ಜೆಎಂಎಫ್​ಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದರು.

ಹಸನಬ್ಬ ವಿರುದ್ದ 2017 ನೇ ಸಾಲಿನಲ್ಲಿ ಅಕ್ರ 65/2017 ಕಲಂ 379 ಐಪಿಸಿ ಮತ್ತು 4,5,11 ಗೋಸಂರಕ್ಷಣಾ ಕಾಯಿದೆ ಮತ್ತು 11(ಎಲ್‌) ಗೋಹತ್ಯೆ ನಿಷೇಧ ಕಾಯಿದೆ , 2008 ನೇ ಸಾಲಿನಲ್ಲಿ ಅಕ್ರ 88/2018 ಕಲಂ 379 ಐಪಿಸಿ ಮತ್ತು 4,5,11 ಗೋಸಂರಕ್ಷಣಾ ಕಾಯಿದೆ ಮತ್ತು 11(ಎಲ್‌) ಗೋಹತ್ಯೆ ನಿಷೇಧ ಕಾಯಿದೆಯಂತೆ ಪ್ರಕರಣಗಳು ದಾಖಲಾಗಿತ್ತು. ಹಾಗೂ ಗೋ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಕಳವು ಮಾಡಿ ತಂದಂತಹ ಜಾನುವಾರುಗಳನ್ನು ಯಾವುದೇ ಪರವಾನಿಗೆ ಇಲ್ಲದೇ ಮನೆಯಲ್ಲಿಯೇ ಕಸಾಯಿಖಾನೆ ನಿರ್ಮಾಣ ಮಾಡಿ, ವಧೆ ಮಾಡಿ ಮಾಂಸ ಮಾಡುತ್ತಿದ್ದು, ಈತನು ಅಕ್ರಮವಾಗಿ ನಿರ್ಮಾಣ ಮಾಡಿರುವ ಕಸಾಯಿಖಾನೆಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿ ಮಂಗಳೂರು ಉಪವಿಭಾಗರವರಿಗೆ ಪೊಲೀಸರು ವರದಿಯನ್ನು ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here