ಸಿಬಿಎಸ್ಇ ಫಲಿತಾಂಶ ಪ್ರಕಟ

0
203


ಕಾಂತಾವರ : ಮೇ 13 ರಂದು ಸಿಬಿಎಸ್ಇ ಫಲಿತಾಂಶ ಪ್ರಕಟಗೊಂಡಿದ್ದು , ಪ್ರಕೃತಿ ನ್ಯಾಷನಲ್ ಸ್ಕೂಲಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು 25 ವಿದ್ಯಾರ್ಥಿಗಳಲ್ಲಿ ಇಬ್ಬರು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 14 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 6 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಪ್ರಣವ್ ಜಿ ಶೆಟ್ಟಿ ಶೇಕಡ 96% ಪಡೆದು ಶಾಲೆಯಲ್ಲಿ ಮೊದಲಿಗನಾಗಿದ್ದಾನೆ. ಕುಮಾರಿ ಅಕ್ಷರ ಭಂಡಾರಿ 88% ಅಂಕಗಳನ್ನು ಹಾಗೂ ಸಿದ್ರಾ ಅನ್ಸ್ 80% ಮತ್ತು ಕಿಶನ್ ಪಿ.ಆರ್ 80℅ಅಂಕಗಳನ್ನು ಪಡೆದುಕೊಂಡು ಉತ್ತೀರ್ಣರಾಗಿರುತ್ತಾರೆ. ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಕ್ರಿಸ್ಪಿನ್ ಜೆರಾಲ್ಡ್ ಕ್ರಾಸ್ತ, ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಯುತ ಚಾರ್ಲ್ಸ ಕ್ರಾಸ್ತಾ , ಸಂಸ್ಥೆಯ ಟ್ರಸ್ಟಿಗಳಾದ ಪ್ರೊಫೆಸರ್ ಪದ್ಮನಾಭ ಗೌಡ ಮತ್ತು ಪ್ರಾಂಶುಪಾಲೆಯಾದ ಶ್ರೀಮತಿ ಜಯ ಶೆಣೈ ಹಾಗೂ ಎಲ್ಲಾ ಶಿಕ್ಷಕ ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here