ನವದೆಹಲಿ: ರಾಜ್ಯಕ್ಕೆ ಬರಪರಿಹಾರವಾಗಿ ಕೇಂದ್ರ ಸರ್ಕಾರ 3,454 ಕೋಟಿ ರೂ. ಅನುದಾನ ಘೋಷಿಸಿದೆ. ತಮಿಳುನಾಡಿಗೂ 275 ಕೋಟಿ ರೂ. ಅನುದಾನ ಬಿಡುಗಡೆ ಮಾಡುವುದಾಗಿ ಘೋಷಿಸಲಾಗಿದೆ.
ರಾಜ್ಯಕ್ಕೆ 18,174 ಕೋಟಿ ರೂ. ಅನುದಾನ ನೀಡುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಬೇಡಿಕೆ ಇಟ್ಟಿತ್ತು. ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಇದೀಗ ಹೇಳಿದಂತೆ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಿದೆ.