ಪರಿಸರ ಸ್ನೇಹಿ ಹಸಿರು ಪಟಾಕಿಗಳ ಬಳಕೆಯಿಂದ ದೀಪಾವಳಿ ಹಬ್ಬ ಆಚರಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

0
29

ಉಡುಪಿ : ಬೆಳಕಿನ ಹಬ್ಬವಾದ ದೀಪಾವಳಿ ಹಬ್ಬ ಆಚರಣೆಯನ್ನು ಪರಿಸರ ಸ್ನೇಹಿ ಹಸಿರು ಪಟಾಕಿಗಳ ಬಳಕೆಯನ್ನು ಜಾಗೃತಿಯಿಂದ ಮಾಡುವುದರೊಂದಿಗೆ ಆಚರಣೆ ಮಾಡಬೇಕು. ಇವುಗಳ ಮಾರಾಟಕ್ಕೆ ಪರವಾನಿಗೆ ನೀಡುವಾಗ ಸುರಕ್ಷತಾ ದೃಷ್ಠಿಯಿಂದ ನಿಯಮಾನುಸಾರ ತಪ್ಪದೇ ಪಾಲಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವವರು ಸಂಬAಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರವನ್ನು ಪಡೆದು, ನಿಯಮಾನುಸಾರ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ಯಾವುದೇ ಅನಾಹುತಗಳು ಸಂಭವಿಸದAತೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ನೋಡಿಕೊಳ್ಳಬೇಕು ಎಂದರು.

ದೀಪಾವಳಿ ಹಬ್ಬ ಹಿನ್ನೆಲೆ ಜಿಲ್ಲಾ ವ್ಯಾಪ್ತಿಯಲ್ಲಿ ನಿಗಧಿಪಡಿಸಿರುವ ತೆರೆದ ಪ್ರದೇಶಗಳಲ್ಲಿ ಪಟಾಕಿ ಮಾರಾಟದ 10*10 ವಿಸ್ತೀರ್ಣದ ಜಿಂಕ್ ಶೀಟ್ ಅಥವಾ ಅಗ್ನಿ ನಿರೋಧಕ ವಸ್ತುಗಳಿಂದ ಮಳಿಗೆಗಳನ್ನು ನಿರ್ಮಿಸಬೇಕು. ಮಳಿಗೆಗಳನ್ನು ಹರಾಜುಗಳ ಮೂಲಕ ಹಂಚಿಕೆ ಮಾಡಬೇಕು. ಈ ಪ್ರದೇಶದಲ್ಲಿ ಸಾರ್ವಜನಿಕರು ಹಾಗೂ ವಾಹನಗಳ ಚಲನವಲನಕ್ಕೆ ಯಾವುದೇ ರೀತಿಯ ತೊಂದರೆ ಉಂಟಾಗದAತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಪಟಾಕಿ ಮಾರಾಟ ಮಳಿಗೆಗಳಿಗೆ ಅಧಿಕಾರಿಗಳು ಆಗಿಂದಾಗ್ಗೆ ಭೇಟಿ ನೀಡಿ, ಹಸಿರು ಪಟಾಕಿಗಳ ಮಾರಾಟ, ಸುರಕ್ಷತೆಗಳ ಕುರಿತು ಪರಿಶೀಲನೆ ಮಾಡಬೇಕು. ಸುಡುಮದ್ದುಗಳನ್ನು ಅಧಿಕೃತ ಸಾಗಾಟ ಮಾರಾಟದ ಪರವಾನಿಗೆ ದಾರರಿಂದ ಹೊರತು ಇತರ ಅಕ್ರಮ ಚಿಲ್ಲರೆ ಸುಡುಮದ್ದು ಮಾರಾಟಗಾರರಿಂದ ಖರೀದಿಸುವುದನ್ನು ನಿಷೇಧಿಸಿದೆ. ಈ ಬಗ್ಗೆಯೂ ಸಹ ಎಚ್ಚರ ವಹಿಸಬೇಕು ಎಂದರು.

ಪಟಾಕಿ ಮಾರಾಟ ಮಳಿಗೆಗಳಲ್ಲಿ ಅಗ್ನಿ ನಂದಕ ಸುಸ್ಥಿತಿಯಲ್ಲಿಡಬೇಕು. ನಿಯಮಾನುಸಾರ ನೀರುಗಳ ಸಂಗ್ರಹಣೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಪರವಾನಿಗೆಯ ಅವಧಿ ನಂತರ ಮಳಿಗೆಯಲ್ಲಿ ಉಳಿದ ತ್ಯಾಜ್ಯವನ್ನು ಸುಡುಮದ್ದುಗಳಿಂದ ಬೇರ್ಪಡಿಸಿ ಮಾರಾಟಗಾರರೇ ತ್ಯಾಜ್ಯ ವಿಲೇವಾರಿ ಸಂಗ್ರಹಣಾ ಘಟಕಕ್ಕೆ ನೀಡಬೇಕು ಎಂದರು.
ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಮೊದಲು ತಹಶೀಲ್ದಾರರ ನೇತೃತ್ವದ ಸಮಿತಿಯು ಖುದ್ದು ಸ್ಥಳ ಪರಿಶೀಲನೆ ನಡೆಸುವುದರೊಂದಿಗೆ, ಅಂಗಡಿ ಮುಂಗಟ್ಟುಗಳ ಸಮೀಪದಲ್ಲಿ, ಜನನಿಬಿಡ ಪ್ರದೇಶಗಳಲ್ಲಿ, ಸಂಚಾರ ವ್ಯವಸ್ಥೆಗೆ ಅಡಚಣೆಯಾಗುವ ಕಡೆಗಳಲ್ಲಿ, ಪಟಾಕಿ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಬಾರದು ಎಂದ ಅವರು ಸಾರ್ವಜನಿಕರು ಆರೋಗ್ಯಕ್ಕೆ ಹಾಗೂ ಪರಿಸರ ಮಾಲಿನ್ಯಕ್ಕೆ ಧಕ್ಕೆ ಉಂಟಾಗದAತೆ ನೋಡಿಕೊಳ್ಳಬೇಕು ಎಂದರು.
ಹಸಿರು ಪಟಾಕಿಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂ ಆರ್ ಕೋಡ್ ಇದ್ದು, ಸದ್ರಿ ಚಿಹ್ನೆ ಹೊಂದಿರುವ ಬಗ್ಗೆ ಪರಿಸರ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಹಸಿರು ಪಟಾಕಿಯ ಚಿಹ್ನೆ ಇಲ್ಲದೇ ಇದ್ದಲ್ಲಿ ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕ್ರಮವಹಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೊಳ್ಳಿ, ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕಿ ಇಶಿತಾ ಗುಪ್ತಾ, ನಗರಸಭೆ ಆಯುಕ್ತ ಮಹಾಂತೇಶ ಹಂಗರಗಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.