ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ 90.4 ಮೆಗಾಹರ್ಟ್ಝ್ ಸಮುದಾಯ ಬಾನುಲಿ ಕೇಂದ್ರವು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿರುವ ಕಥೆ ಕೇಳೋಣ ಸರಣಿ ಕಾರ್ಯಕ್ರಮದ 175 ನೇ ಸಂಚಿಕೆ ಸೆಪ್ಟೆಂಬರ್ ತಿಂಗಳ ದಿನಾಂಕ 6 ರಂದು ಶನಿವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ.
ಈ ವಿಶೇಷ ಸಂಚಿಕೆಯಲ್ಲಿ ಆಕಾಶವಾಣಿ ನಿವೃತ್ತ ಕಾರ್ಯಕ್ರಮ ಮುಖ್ಯಸ್ಥರಾದ ಡಾ.ಸದಾನಂದ ಪೆರ್ಲ ಮತ್ತು ಆಕಾಶವಾಣಿ ಉದ್ಘೋಷಕರಾಗಿರುವ ಬಿ.ಕೆ ಸುಮತಿ ಅವರಿಂದ ಶುಭನುಡಿಗಳನ್ನೂ ಕೇಳಲಿದ್ದೇವೆ. ಸಾಹಿತ್ಯಾಸಕ್ತ ಪತ್ರಿಕಾ ಛಾಯಾಗ್ರಾಹಕರಾದ ಆಸ್ಟ್ರೋ ಮೋಹನ್ ಸ್ವರಚಿತ ಕಥೆಯೊಂದಿಗೆ ಕಥೆಗಾರರಾಗಿ ಹೊರಹೊಮ್ಮಿದ್ದಾರೆ. ಸೆಪ್ಟೆಂಬರ್ 7 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು. ರೇಡಿಯೊದಲ್ಲಿ ಮಾತ್ರವಲ್ಲದೆ
ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/ id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿಕೊಂಡು ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು
ರೇಡಿಯೊ ಮಣಿಪಾಲ್ ನ ಪ್ರಕಟಣೆ ತಿಳಿಸಿದೆ.

