ರೇಡಿಯೊ ಮಣಿಪಾಲ್ ನ ಕಥೆ ಕೇಳೋಣಕ್ಕೆ 200ರ ಸಂಭ್ರಮ

0
11

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ 90.4 ಮೆಗಾಹರ್ಟ್ಝ್ ಸಮುದಾಯ ಬಾನುಲಿ ಕೇಂದ್ರವು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿರುವ ಕಥೆ ಕೇಳೋಣ ಸರಣಿ ಕಾರ್ಯಕ್ರಮದ 200 ನೇ ಸಂಚಿಕೆ ಫೆಬ್ರವರಿ ತಿಂಗಳ ದಿನಾಂಕ 28ರಂದು ಶನಿವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ.

ಈ ಸಂಚಿಕೆಯಲ್ಲಿ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ ಇದರ ನಿರ್ದೇಶಕರು ಮತ್ತು ಪ್ರಾಧ್ಯಾಪಕರಾದ ಡಾ.ಶುಭಾ ಹೆಚ್.ಎಸ್ ಅವರ ಶುಭನುಡಿ ಮತ್ತು ಹಿರಿಯ ಸಾಹಿತಿ, ಹರಿದಾಸರೂ ಆಗಿರುವ ಬಿ.ಸಿ ರಾವ್ ಶಿವಪುರ ಅವರಿಂದ ಸ್ವರಚಿತಕಥೆಯನ್ನು ಕೇಳುವಿರಿ. ಮಾರ್ಚ್ 1′ ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೊದಲ್ಲಿ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿಕೊಂಡು ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು
ರೇಡಿಯೊ ಮಣಿಪಾಲ್ ನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here