Tuesday, December 3, 2024
Homeಕಾರ್ಕಳರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬದ ಆಚರಣೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬದ ಆಚರಣೆ

ಮಂಗಳವಾರ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬದ ಆಚರಣೆ ಕಾರ್ಯಕ್ರಮವನ್ನು, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪೆರುವಾಜೆ, ಕಾರ್ಕಳ ಇಲ್ಲಿ ದಿನಾಂಕ 05.11.2024 ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟು, ಕಳೆದ ತಿಂಗಳು ಮಲೇಷ್ಯಾದಲ್ಲಿ ನಡೆದ ಅಂತರರಾಷ್ಟ್ರೀಯ ಮುಕ್ತ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಮತ್ತು ಎತ್ತರ ಜಿಗಿತದಲ್ಲಿ ಬೆಳ್ಳಿ ಪದಕ ಪಡೆದ ಮೆಸ್ಕಾಂ ನಿವೃತ್ತ ಉದ್ಯೋಗಿ ಜಯಕೃಷ್ಣ ಹೆಗಡೆ ಇವರನ್ನು ಗೌರವಿಸಲಾಯ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಭುವನೇಂದ್ರ ಪ್ರೌಢ ಶಾಲೆ, ಕಾರ್ಕಳ ಇಲ್ಲಿನ ಕನ್ನಡ ಪ್ರಾಧ್ಯಾಪಕರು, ವಾಗ್ಮಿ ಗಣೇಶ್ ಜಾಲ್ಸೂರು ಇವರು ಭಾಗವಹಿಸಿ, ದೀಪಾವಳಿ ಹಬ್ಬದ ಆಚರಣೆಯ ಮಹತ್ವ ಹಾಗು ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು ಕನ್ನಡ ಭಾಷೆಯ ಬಳಕೆ ಮತ್ತು ರಕ್ಷಣೆ ಕುರಿತು ತಮ್ಮ ವಿಚಾರ ಧಾರೆಯನ್ನು ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಸಂಸ್ಥೆಯ ಮಾರ್ಗದರ್ಶಕರಾದ ರೋಟರಿ ಮಾಜಿ ಜಿಲ್ಲಾ ಗವರ್ನರ್ ಡಾ.ಭರತೇಶ್ ಆದಿರಾಜ್, ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಅಧ್ಯಕ್ಷ ಉಪೇಂದ್ರ ವಾಗ್ಲೆ, ಆನ್ಸ್ ಅಧ್ಯಕ್ಷೆ ಶರ್ಮಿಳಾ ರಮೇಶ್ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಸುಬ್ರಹ್ಮಣ್ಯ ಉಪಾಧ್ಯಯ ನೆರವೇರಿಸಿದರು, ಕಾರ್ಯದರ್ಶಿ ಪ್ರಶಾಂತ್ ಜೈನ್ ವಂದಿಸಿದರು.

RELATED ARTICLES
- Advertisment -
Google search engine

Most Popular