ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ” ಕನ್ನಡ ರಾಜ್ಯೋತ್ಸವ ” ಆಚರಣೆ

0
16

ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ 71 ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು . ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಯುವ ಸಾಹಿತಿ ಮತ್ತು ಕನ್ನಡ ಉಪನ್ಯಾಸಕರಾದ ಸುಪ್ರೀತಾ ಚರಣ್ ಅವರು ಮಾತನಾಡಿ ಕನ್ನಡ ಭಾಷೆಯ ಸತ್ವ ಏನು ಎಂಬುದನ್ನು ತನ್ನ ಸ್ವಂತ ಅನುಭವಗಳ ನೈಜ ಮಾತುಗಳೊಂದಿಗೆ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು. ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷರಾದ ದಯಾನಂದ ರೈ ಮನವಳಿಕೆ ಅವರು ವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಆಡಳಿತ ಅಧಿಕಾರಿಗಳಾದ ಶ್ರೀಪತಿ ರಾವ್ ಎಚ್ ಉಪಸ್ಥಿತರಿದ್ದರು . ಕುಂತೂರು ಮಾರ್ ಇವಾನಿಯಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ ಪ್ರಶಿಕ್ಷಣಾರ್ಥಿಗಳಾದ ಸುನಿತಾ, ದೀಕ್ಷಾ ಪಿ. ಕೆ , ಮತ್ತು ಯಶೋಧ ಕೃಷ್ಣಅವರು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜನೆ ಮಾಡಿ ವಿಜೇತರಿಗೆ ಬಹುಮಾನ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಕನ್ನಡ ರಾಜ್ಯೋತ್ಸವದ ಗಾಳಿಪಟ ರಚನೆ ಮತ್ತು ಹಾರಾಟದ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ವಿಜ್ಞಾನ ಶಿಕ್ಷಕಿಯಾದ ನಿವ್ಯ ಪಿ.ಎನ್,ಹಿಂದಿ ಶಿಕ್ಷಕರಾದ ಮಹೇಶ್ ಲಮಾಣಿ, ಗಣಿತ ಶಿಕ್ಷಕಿಯಾದ ರಕ್ಷಿತಾ ಅವರು ಸಹಕರಿಸಿದರು. ಕನ್ನಡ ಶಿಕ್ಷಕಿಯಾದ ಅಕ್ಷತಾ ಅವರು ಕಾರ್ಯಕ್ರಮ ನಿರೂಪಿಸಿದರು. ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಪ್ರಾಂಶುಪಾಲರಾದ ರೂಪ ಜೆ ರೈ ಅವರ ಸ್ವಾಗತ ದೊಂದಿಗೆ ಆರಂಭವಾದ ಕಾರ್ಯಕ್ರಮ ಮುಖ್ಯ ಗುರುಗಳಾದ ನವೀನ್ ರೈ ಅವರ ವಂದನಾರ್ಪಣೆಯೊಂದಿಗೆ ಕೊನೆಗೊಂಡಿತು.