ಕಾರ್ಗಿಲ್ ಯುದ್ಧದಲ್ಲಿ ಭಾರತ ವಿಜಯ ಸಾಧಿಸಿದ ಹಿನ್ನೆಲೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ ೧ಆಗಸ್ಟ್ ೨೦೨೬ ಶನಿವಾರ ಬೆಳಗ್ಗೆ ೧೧ ಕ್ಕೆ ಸರಿಯಾಗಿ ವಿವೇಕಾನಂದ ಪದವಿಪೂರ್ವÀ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಗಿಲ್ ಯುದ್ಧದಲ್ಲಿ ಭಾರತದ ಸಶಸ್ತ್ರ ಪಡೆಗಳ ವೀರಗಾಥೆಯನ್ನು ಸ್ಮರಿಸುತ್ತಾ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ವೀರ ಯೋಧರಿಗೆ ಈ ಸಂದರ್ಭದಲ್ಲಿ ನಮನ ಸಲ್ಲಿಸಲಾಗುವುದು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಹಾಗೂ ವಿದ್ಯಾರ್ಥಿಗಳೊಂದಿಗೆ ವಿಶೇಷ ಸಂವಾದ ನಡೆಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನುವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿ ಅಧ್ಯಕ್ಷರಾದ ಶ್ರೀ ರವೀಂದ್ರ ಪಿ. ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಶೇಷ ಅಭ್ಯಾಗತರಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಕಾರ್ಯದರ್ಶಿಗಳಾದ ಶ್ರೀ ವಿಜಯನಾರಾಯಣ ಕೆ. ಎಂ. ಭಾಗವಹಿಸಲಿದ್ದಾರೆ.
ವಿಶೇಷ ಸಂವಾದ
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂಸದ ಕಾಪ್ಟನ್ ಬ್ರಿಜೇಶ್ ಚೌಟ ವಿಶೇಷ ಸಂವಾದ ನಡೆಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿ ಸದಸ್ಯರು, ಉಪನ್ಯಾಸಕ-ಉಪನ್ಯಾಸಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

