ಲಯನ್ಸ್ ಕ್ಲಬ್ ಬೆಳ್ಮಣಿನಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

0
8

ಲಯನ್ಸ್ ಕ್ಲಬ್ ಬೆಳ್ಮಣಿನ ವತಿಯಿಂದ 71ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶಸ್ವಿಯಾಗಿ ಆಚರಿಸಲಾಯಿತು. ಕನ್ನಡ ಭುವನೇಶ್ವರಿ ಭಾವಚಿತ್ರಕ್ಕೆ ಲಯನ್ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ ಪುಷ್ಪಾಂಜಲಿ ಅರ್ಪಿಸಿ ಗೌರವಾರ್ಪಣೆ ಮಾಡಿದರು.

ಶಾಲಾ ವಿದ್ಯಾರ್ಥಿಗಳು ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಪ್ರತಿಬಿಂಭಿಸುವ ಕನ್ನಡದ ಹಾಡುಗಳನ್ನು ಪ್ರಸ್ತುತಿ ಪಡಿಸಿದರು. ಶಾಲಾ ಶಿಕ್ಷಕರು ಮತ್ತು ಮಾಜಿ ಜಿಲ್ಲಾ ಗವರ್ನರ್ ಲಯನ್ ಎನ್ ಎಮ್ ಹೆಗಡೆಯವರು ಕರ್ನಾಟಕ ರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಲಯನ್ಸ್ ಕ್ಲಬ್ ಬೆಳ್ಮಣಿನ ಅಧ್ಯಕ್ಷರಾದ ಲಯನ್ ಬಿ ಎಚ್ ಶಿವರಾಮ ಆಚಾರ್ಯ, ಕಾರ್ಯದರ್ಶಿ ಲಯನ್ ಟೀನಾ ಡೆಸಾ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಡೊಮ್ನಿಕ್ ಅಂದ್ರಾದೆ, ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಿದರು. ಲಯನ್ ಟೀನಾ ಡೆಸಾರವರು ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ಹಂಚಿದರು.