ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ ಇಲ್ಲಿ ೭೧ ನೇ ಕನ್ನಡ ರಾಜ್ಯೋತ್ಸವ ಆಚರಣೆ ಅತ್ಯಂತ ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಎಸ್.ವಿ.ಎಸ್ ಪದವಿ ಪೂರ್ವ ಕಾಲೇಜು ವಿದ್ಯಾಗಿರಿ ಇಲ್ಲಿನ ಕನ್ನಡ ಉಪನ್ಯಾಸಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಗಳಾದ ಶ್ರೀಯುತ ಶಶಿಧರ್ ಎಸ್ ಆಗಮಿಸಿದರು. ಕನ್ನಡ ನಾಡು, ನುಡಿ, ಭಾಷೆ ಹಾಗೂ ಸಂಸ್ಕೃತಿಯ ಮಹತ್ವವನ್ನು ತಿಳಿಸುತ್ತಾ ಪ್ರತಿಯೊಬ್ಬರು ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಂಡು ಅದನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಕೈ ಜೋಡಿಸಬೇಕೆಂದು ಕರೆ ನೀಡಿದರು. ಮುಖ್ಯ ಶಿಕ್ಷಕ ಶ್ರೀಯುತ ಹರಿಪ್ರಸಾದ್ ಅವರು ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸುವ ಸಂದೇಶವನ್ನು ಸಾರಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನೃತ್ಯ, ಪ್ರಹಸನ ,ಕವನ ವಾಚನ, ಗಾಯನ ನಡೆಯಿತು. ಈ ಮೂಲಕ ವಿದ್ಯಾರ್ಥಿಗಳು ಕನ್ನಡ ನಾಡಿನ ಹಿರಿಮೆ ಭಾಷೆಯ ಸೊಗಡು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಅನಾವರಣಗೊಳಿಸಿದರು. ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ಚೈತ್ರ ಶೆಟ್ಟಿ, ಪೂರ್ವಪ್ರಾಥಮಿಕ ವಿಭಾಗದ ಸಂಯೋಜಕಿಯಾದ ಶ್ರೀಮತಿ ವೀಣಾ ದೇವಾಡಿಗ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಕುಮಾರಿ ಭುವಿ ಸ್ವಾಗತಿಸಿದರು, ಜಸಲ್ ಎಸ್ ಪೂಜಾರಿ ವಂದಿಸಿ , ಕುಮಾರಿ ಶಿಫಾಲಿ , ಯಶಸ್ಸ್ ಹೊಳ್ಳ , ಇಸಾಲ್ ಫಾತೀಮಾ, ಸಾನ್ವಿ ರಾವ್ ಜಂಟಿಯಾಗಿ ಕಾರ್ಯಕ್ರಮವನ್ನು ನಿರೂಪಿಸಿದರು.
Home Uncategorized ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ ಇಲ್ಲಿ 31 ನೇ ಕನ್ನಡ ರಾಜ್ಯೋತ್ಸವ...

