ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026 ಪರ್ಯಾಯ ಶ್ರೀ ಪುತ್ತಿಗೆ ಮಠದ ಕಿರಿಯ ಶ್ರೀಗಳಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರ ಜನ್ಮ ನಕ್ಷತ್ರದ ಸಂಭ್ರಮ
ಉಡುಪಿ ಶ್ರೀ ಪುತ್ತಿಗೆ ಮಠದ ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರ ಜನ್ಮನಕ್ಷತ್ರದ ಪ್ರಯುಕ್ತ ಶ್ರೀ ಕೃಷ್ಣಮಠದಲ್ಲಿ ಪರ್ಯಾಯ ಶ್ರೀಪಾದರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಶ್ರೀ ಅದಮಾರು ಮಠದ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರ ಮೂಲಕ ಶ್ರೀಕೃಷ್ಣ ದೇವರಿಗೆ ಮುತ್ತಿನ ಕವಚವನ್ನು ಸಮರ್ಪಿಸಿದರು.