ನಂದಳಿಕೆ : ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆಪ್ಟೆಂಬರ್ 14ರಂದು ಸೋಮವಾರ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ನ ರಜತ ಮಹೋತ್ಸವ ಸಭಾಂಗಣದಲ್ಲಿಅಬ್ಬನಡ್ಕ ಫ್ರೆಂಡ್ಸ್ ಕ್ಲಬ್’ನ 26ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಮತ್ತು 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಂಭ್ರಮ ಜರಗಲಿದೆ.
ಬೆಳಿಗ್ಗೆ ಗಂಟೆ 9ಕ್ಕೆ ಸರಿಯಾಗಿ ಪೂಜಾ ಕಾರ್ಯಕ್ರಮ ಆರಂಭ, ಬೆಳಿಗ್ಗೆ ಗಂಟೆ 11ಕ್ಕೆ ಗಣ ಹೋಮ ಪೂಜೆ, ಬೆಳಿಗ್ಗೆ ಗಂಟೆ 11-15ಕ್ಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಚೆoಡೆ ಬಳಗದವರಿಂದ ಚೆoಡೆವಾದನ ಕಾರ್ಯಕ್ರಮ, ಬೆಳಿಗ್ಗೆ ಗಂಟೆ 11:30 ರಿಂದ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಮಕ್ಕಳ ಭಜನಾ ಮಂಡಳಿ ಅವರಿಂದ ಭಜನೋತ್ಸವ ಕಾರ್ಯಕ್ರಮ, ಮಧ್ಯಾಹ್ನ ಗಂಟೆ 12ಕ್ಕೆ ಮಹಾಪೂಜೆ, ಮಧ್ಯಾಹ್ನ ಗಂಟೆ 12:30ಕ್ಕೆ ಪ್ರಸಾದ ವಿತರಣೆ, ಮಧ್ಯಾಹ್ನ ಗಂಟೆ 12:30 ರಿಂದ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಅವರಿಂದ ಕುಣಿತ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಗಂಟೆ 01-30 ರಿಂದ ಸಾರ್ವಜನಿಕ ಅನ್ನ ಸಂತರ್ಪಣೆ, ಮಧ್ಯಾಹ್ನ ಗಂಟೆ 2:30 ರಿಂದ ಊರಿನ ಎಲ್ಲಾ ಹಿರಿಯರು ಮತ್ತು ಮಕ್ಕಳಿಗಾಗಿ ಚೌತಿದ ಗೊಬ್ಬು ಗ್ರಾಮೀಣ ಕ್ರೀಡೋತ್ಸವ, ಮೊಸರು ಕುಡಿಕೆ ಉತ್ಸವ, ಹಗ್ಗ ಜಗ್ಗಾಟ ಸ್ಪರ್ಧೆ, ಸಂಜೆ ಗಂಟೆ 06-00ರಿಂದ ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈಭವ ಕಾರ್ಯಕ್ರಮ, ರಾತ್ರಿ ಗಂಟೆ 7ರಿಂದ ಅಬ್ಬನಡ್ಕ ಸಂಗೀತ ತಂಡದಿಂದ ಸಂಗೀತ ರಸಮಂಜರಿ ಕಾರ್ಯಕ್ರಮ, ರಾತ್ರಿ ಗಂಟೆ 8ಕ್ಕೆ ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ, ಬಹುಮಾನ ವಿತರಣೆ ಕಾರ್ಯಕ್ರಮ, ರಾತ್ರಿ ಗಂಟೆ 9:00 ರಿಂದ ತುಳುವ ಸಿರಿ ಕಲಾವಿದರು ನಂದಳಿಕೆ ಅಭಿನಯದ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಹರಿಪ್ರಸಾದ್ ನಂದಳಿಕೆ ರಚಿಸಿ ನಿರ್ದೇಶಿಸಿದ ತುಳು ಹಾಸ್ಯಮಯ ಸಾಮಾಜಿಕ ನಾಟಕ “ಆಯೆ ಮನಿಪುಜೆ” ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಪತ್ರಿಕಾ ಪ್ರಕಟಣೆಗೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್’ನ ಅಧ್ಯಕ್ಷರಾದ ಸುರೇಶ್ ಪೂಜಾರಿ ಅಬ್ಬನಡ್ಕ ಹಾಗೂ ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರದೀಪ್ ಸುವರ್ಣ ಕೆಮ್ಮಣ್ಣು ಅವರು ತಿಳಿಸಿದ್ದಾರೆ.

