ಬೆಂಗಳೂರು: ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಪೊಲೀಸರು ದರ್ಶನ್ ಅವರನ್ನು ಬಂಧಿಸಿದ್ದಾರೆ ಎಂದು ವರದಿಗಳಾಗಿವೆ.
ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಆರೋಪಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ದರ್ಶನ್ ಸಹಿತ 10 ಮಂದಿಯನ್ನು ಬಂಧಿಸಲಾಗಿದೆ.
ನಟ ದರ್ಶನ್ ಅವರಿಗೆ ಆತ್ಮೀಯರಾಗಿರುವ ನಟಿ ಪವಿತ್ರ ಗೌಡ ಅವರ ಫೋಟೊಗಳಿಗೆ ರೇಣುಕಾಸ್ವಾಮಿ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲವಾಗಿ ಕಮೆಂಟ್ ಮಾಡುತ್ತಿದ್ದ. ಅಲ್ಲದೆ ಕೆಟ್ಟ ಸಂದೇಶಗಳನ್ನೂ ಕಳುಹಿಸುತ್ತಿದ್ದ ಎನ್ನಲಾಗಿದೆ. ಜೂ.8ರಂದು ರೇಣುಕಾಸ್ವಾಮಿಯನ್ನು ವಿನಯ್ ಎನ್ನುವವರ ಶೆಡ್‌ಗೆ ಕರೆದು ಅಲ್ಲಿ ಬಲವಾದ ಆಯುಧದಿಂದ ಅವರಿಗೆ ಹೊಡೆದು ಕೊಲೆಗೈದು, ಶವವನ್ನು ಮೋರಿಗೆ ಎಸೆಯಲಾಗಿತ್ತು. ಈ ವೇಳೆ ದರ್ಶನ್ ಸ್ಥಳದಲ್ಲೇ ಇದ್ದರು ಎನ್ನಲಾಗಿದೆ.
ಆರಂಭದಲ್ಲಿ ಇದೊಂದು ಆತ್ಮಹತ್ಯೆ ಪ್ರಕರಣವೆಂದು ನಂಬಲಾಗಿತ್ತು. ಆದರೆ ತನಿಖೆಯ ಬಳಿಕ ಇದೊಂದು ಕೊಲೆ ಎಂದು ಗೊತ್ತಾಗಿದೆ. ಆರಂಭದಲ್ಲಿ ಮೂವರು ಠಾಣೆಗೆ ಬಂದು ಹಣಕಾಸು ವಿಚಾರದಲ್ಲಿ ಕೊಲೆ ಮಾಡಿರುವುದಾಗಿ ಹೇಳಿಕೊಂಡಿದ್ದರು. ಆದರೆ ಪೊಲೀಸರಿಗೆ ಅನುಮಾನ ಬಂದು, ಮತ್ತಷ್ಟು ಆಳವಾಗಿ ತನಿಖೆ ನಡೆಸಿದಾಗ ಈ ವಿಷಯ ಬೆಳಕಿಗೆ ಬಂತು ಎನ್ನಲಾಗಿದೆ.
ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ
RELATED ARTICLES