ಅ.10 – 20 ರವರೆಗೆ ಓಂ ಚಂಡಿಕಾ ಸೇವಾ ಟ್ರಸ್ಟ್ನಿಂದ ದಸರಾ ಪ್ರಯುಕ್ತ ಚಂಡಿಕಾ ಹೋಮ

0
12

ದಾವಣಗೆರೆ : ದಾವಣಗೆರೆಯ ಓಂ ಚಂಡಿಕಾ ಸೇವಾ ಟ್ರಸ್ಟ್ ಆಶ್ರಯದಲ್ಲಿ ದಸರಾ ಹಬ್ಬದ ಪ್ರಯುಕ್ತ 11 ದಿನಗಳ ಕಾಲ ನಗರದ ಎಂ.ಸಿ.ಸಿ. `ಬಿ’ ಬ್ಲಾಕ್, 7ನೇ ಮುಖ್ಯ ರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದ ಎದುರು ಚಂಡಿಕಾಶ್ರಮದ ಹೊರಾಂಗಣದಲ್ಲಿ ಶ್ರೀ ಚಂಡಿಕಾ ಹೋಮ ಹಮ್ಮಿಕೊಳ್ಳಲಾಗಿದೆ ಎಂದು ಓಂ ಚಂಡಿಕಾ ಸೇವಾ ಟ್ರಸ್ಟ್ನ ಸಂಸ್ಥಾಪಕರಾದ ಡಾ. ಅಘೋರಿ ಚಿದಂಬರ ಯೋಗಿಯವರು ತಿಳಿಸಿದ್ದಾರೆ.

ಯಾವುದೇ ಜಾತಿ, ಮತ, ಬೇಧವಿಲ್ಲದೇ ಸಾರ್ವಜನಿಕರು ಈ ಆಧ್ಯಾತ್ಮಿಕ ಪರಂಪರೆಯ ಶ್ರೀ ಚಂಡಿಕಾ ಹೋಮಕ್ಕೆ ಹೆಸರು ನೊಂದಾಯಿಸಲು 9380389236 ಈ ಸನೀಹವಾಣಿಗೆ ಸಂಪರ್ಕಿಸಬಹುದು ಎಂದು ಓಂ ಚಂಡಿಕಾ ಸೇವಾ ಟ್ರಸ್ಟ್ನ ಗೌರವ ಸಲಹೆಗಾರರಾದ ಸಾಲಿಗ್ರಾಮ ಗಣೇಶ್ ಶೆಣೈ ವಿನಂತಿಸಿದ್ದಾರೆ.