ಅ.18ರಂದು ಶ್ರೀ ಮಂತ್ರ ದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆಮಾರ್ ನಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಚಂಡಿಕಾ ಹೋಮ

0
5

ಕಲ್ಕಡ್ಕ : ಬಂಟ್ವಾಳ ತಾಲೂಕಿನ ಅಮ್ಟೂರ್ ಗ್ರಾಮದ ಶ್ರೀ ಮಂತ್ರ ದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆಮಾರ್ ಇಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಅಕ್ಟೋಬರ್ 18ರ ಭಾನುವಾರ ಬೆಳಿಗ್ಗೆ ಚಂಡಿಕಾ ಹೋಮ ನಡೆಯಲಿರುವುದು.

ಮಧ್ಯಾಹ್ನ 2 ಗಂಟೆಗೆ ಪ್ರಸಿದ್ಧ ಯಕ್ಷಗಾನ ಕೂಡು ಕಲಾವಿದರಿಂದ ಶಾಂಭವಿ ವಿಜಯ ಯಕ್ಷಗಾನ ಪ್ರದರ್ಶನ ನಡೆಯಲಿರುವುದು.
ಈ ಎಲ್ಲಾ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕ್ಷೇತ್ರದ ಮುಖ್ಯಸ್ಥರಾದ ಮನೋಜ್ ಕುಮಾರ್ ಕಟ್ಟೆ ಮಾರು ತಿಳಿಸಿರುತ್ತಾರೆ.