Tuesday, June 18, 2024
HomeUncategorizedಆಂಧ್ರ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ನಾಳೆ ಪ್ರಮಾಣ ವಚನ ಸ್ವೀಕಾರ

ಆಂಧ್ರ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ನಾಳೆ ಪ್ರಮಾಣ ವಚನ ಸ್ವೀಕಾರ

ಅಮರಾವತಿ: ಆಂಧ್ರ ಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಟಿಡಿಪಿ ಮುಖ್ಯಸ್ಥ ಎನ್.‌ ಚಂದ್ರಬಾಬು ನಾಯ್ಡು ನಾಲ್ಕನೇ ಅವಧಿಗೆ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿ ಇರುವ ಕೆಸರಪಲ್ಲಿ ಐಟಿ ಪಾರ್ಕ್‌ನಲ್ಲಿ ಬೆಳಿಗ್ಗೆ 11:27ಕ್ಕೆ ನಾಯ್ಡು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಟಿಡಿಪಿ ಶಾಸಕಾಂಗ ಪಕ್ಷದ ನಾಯಕರಾಗಿ ಚಂದ್ರಬಾಬು ನಾಯ್ಡು ಆಯ್ಕೆಯಾಗಿದ್ದಾರೆ. ಟಿಡಿಪಿ, ಬಿಜೆಪಿ, ಜನಸೇನಾ ನಾಯಕರನ್ನು ಒಳಗೊಂಡು ಸರ್ಕಾರ ರಚನೆಯಾಗಲಿದೆ. ರಾಜ್ಯಪಾಲ ಎಸ್.‌ ಅಬ್ದುಲ್‌ ನಜೀರ್‌ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸಹಿತ ಎನ್‌ಡಿಎ ಮೈತ್ರಿಕೂಟದ ನಾಯಕರು ಪ್ರಮಾಣ ವಚನ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ. ನಾಯ್ಡು ಅವರ ಪುತ್ರ ನಾರಾ ಲೋಕೇಶ್‌, ಜನಸೇನಾ ನಾಯಕ ಪವನ್‌ ಕಲ್ಯಾನ್‌, ಎನ್.‌ ಮನೋಹರ್‌ ಸೇರಿದಂತೆ ಹಲವು ನಾಯಕರು ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ.

RELATED ARTICLES
- Advertisment -
Google search engine

Most Popular