ಮೂಡುಬಿದಿರೆ : ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ವ್ಯಾಪ್ತಿಯ ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಮೂಡುಬಿದಿರೆಯ ಹೊಸಬೆಟ್ಟು ನಿವಾಸಿ ಚಂದ್ರಹಾಸ್ ಸನಿಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಿಲ್ಲಾ ಕಂಬಳ ಸಮಿತಿಯ ಮಹಾಸಭೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಸದಸ್ಯರ ಸರ್ವಾನುಮತದೊಂದಿಗೆ ಚಂದ್ರಹಾಸ್ ಸನಿಲ್ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಕಂಬಳ ಕ್ರೀಡೆಯ ಸಂರಕ್ಷಣೆ, ಸಂಪ್ರದಾಯದ ಉಳಿವು, ಸಂಘಟನೆಯ ಬಲವರ್ಧನೆ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ವಿವಿಧ ಚಟುವಟಿಕೆಗಳ ಕುರಿತು ಸಮಗ್ರ ಚರ್ಚೆ ನಡೆಯಿತು.
ಕಂಬಳ ಕ್ರೀಡೆಯ ಬೆಳವಣಿಗೆಗೆ ನೂತನ ಅಧ್ಯಕ್ಷರ ನೇತೃತ್ವದಲ್ಲಿ ಮತ್ತಷ್ಟು ಉತ್ತೇಜನ ದೊರೆಯಲಿ ಎಂದು ಸದಸ್ಯರು ಆಶಯ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು.

